ಬೆಂಗಳೂರು : ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಸರಣಿ ಟ್ವೀಟ್ ನಲ್ಲಿ ಕಿಡಿಕಾರಿದೆ.
ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. √ ಮಲ್ಲಿಕಾರ್ಜುನ ಖರ್ಗೆ √ ಡಾ.ಜಿ.ಪರಮೇಶ್ವರ್ √ ಮೋಟಮ್ಮ √ ಶ್ರೀನಿವಾಸ್ ಪ್ರಸಾದ್ ಸಿದ್ದರಾಮಯ್ಯ ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಮೋದಿ ಅವರ ಮೇಕ್ ಇನ್ ಇಂಡಿಯಾ ದೇಶದ ಏಳ್ಗೆಗೆ ದಿವ್ಯ ಮಂತ್ರ. ಇದನ್ನು ಪಠಿಸುತ್ತಾ ತನ್ನ ಸಂಪತ್ತು, ಪ್ರತಿಭೆಯನ್ನು ಮೇಳೈಸಿದರೆ ಪ್ರಬಲ ರಾಷ್ಟ್ರವಾಗಬಹುದು ಎಂಬುದನ್ನು ಭಾರತ ತೋರಿಸಿದೆ. ಆಮದಿನಿಂದ ತತ್ತರಿಸಿದ್ದ ಆಟಿಕೆ ಉದ್ಯಮ ಇಂದು ಶೇ.61ರಷ್ಟು ರಫ್ತು ಮಾಡುತ್ತಿದೆ. ಇದೇ ಆತ್ಮನಿರ್ಭರದ ಮೋಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ.
ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ.
— BJP Karnataka (@BJP4Karnataka) December 12, 2022
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ @siddaramaiah ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ?
— BJP Karnataka (@BJP4Karnataka) December 12, 2022
ಮಾನ್ಯ @siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.
— BJP Karnataka (@BJP4Karnataka) December 12, 2022
ಅಂಡಮಾನ್ ಸಮುದ್ರದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನ ಕುರಿತು ಕಾಲೇಜುಗಳಿಗೆ ಮಹತ್ವದ ಮಾಹಿತಿ |Scholarship