ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ( BJP veteran LK Advani ) ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದಾರೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರು ಈ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗೆ ಮರಳಿದ್ದರು.
ಇಂದು ಮತ್ತೆ ಎಲ್.ಕೆ ಅಡ್ವಾನಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ಕುಟುಂಬಸ್ಥರು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
BREAKING : ಸಾಗರದಲ್ಲಿ ಹೊತ್ತಿ ಉರಿದ ಸರ್ಕಾರಿ ಬಸ್ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
BREAKING : `CM ಸಿದ್ದರಾಮಯ್ಯ’ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ!