ಮೈಸೂರು : ಮಧು ಹೇರ್ ಕಟ್ ವಿಚಾರವಾಗಿ ವಿಜಯೇಂದ್ರ ಹೇಳಿಕೆ ವಿಚಾರ ಮೈಸೂರಿನಲ್ಲಿ ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಮಾತನಾಡುವವರು ಬಂದು ಹೇರ್ ಕಟ್ ಮಾಡಲಿ. ಡಿಕೆ ಗಡ್ಡದ ಬಗ್ಗೆ ಮಾತನಾಡಿ 130 ಸ್ಥಾನದಿಂದ 60ಕ್ಕೆ ಬಂದರು. ಈಗ ನನ್ನ ಕೂದಲು ಬಗ್ಗೆ ಮಾತಾಡಿ 26 ರಿಂದ 6ಕ್ಕೆ ಬರುತ್ತಾರೆ ಎಂದು ಲೇವಡಿ ಮಾಡಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಬಿಜೆಪಿಗರು ಮಾತಾಡಿದ್ರಾ? ಮೋದಿ ಕೊವಿಡ್ ಟೈಮ್ ನಲ್ಲಿ ಗಡ್ಡ ಬಿಟ್ಟಿದ್ದರು ಏಕೆ ಪ್ರಶ್ನೆಸಲಿಲ್ಲ? ನನ್ನ ಹೇರ್ ಸ್ಟೈಲ್ ಬಗ್ಗೆ ಮಾತನಾಡುವುದು ಒಂದು ವಿಷಯವಾ? ಎಂದು ಮೈಸೂರಿನಲ್ಲಿ ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.
ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ
ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ.ಇದೆ ವೇಳೆ ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಣೆ ನೀಡಿದರು.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ. ಕೆಲವು ವ್ಯಾಕರಣ ಹಾಗೂ ಪದಗಳ ಬದಲಾವಣೆ ಮಾಡಲಾಗಿದೆ. ತಪ್ಪಿದ್ದನ್ನು ಸರಿ ಮಾಡಲಾಗಿದೆ. ಒಂದು ಪೇಜ್ ಬದಲಾಗಿದೆ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು.