Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಾದಕ ದ್ರವ್ಯ ಮುಕ್ತ ಭಾರತಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್: 3 ವರ್ಷಗಳ ಭಾರಿ ಅಭಿಯಾನಕ್ಕೆ ಸಿದ್ಧತೆ!

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

BREAKING: ​ಪಾಟ್ನಾದಲ್ಲಿ ಖಾನ್ ಸರ್ ಕೋಚಿಂಗ್ ಸೆಂಟರ್ ಮೇಲೆ ಗುಂಡಿನ ದಾಳಿ; ಭದ್ರತಾ ಸಿಬ್ಬಂದಿಗೆ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಸಲ್ಮಾನರಿಗೆ ಮೀಸಲಾತಿ ವಿರೋಧಿಸಿ ಬಿಜೆಪಿಯಿಂದ ತೀವ್ರ ಹೋರಾಟ: ಬಿವೈ ವಿಜಯೇಂದ್ರ
KARNATAKA

ಮುಸಲ್ಮಾನರಿಗೆ ಮೀಸಲಾತಿ ವಿರೋಧಿಸಿ ಬಿಜೆಪಿಯಿಂದ ತೀವ್ರ ಹೋರಾಟ: ಬಿವೈ ವಿಜಯೇಂದ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು.

ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. ಅಗತ್ಯವಿದ್ದಲ್ಲಿ ರಾಜ್ಯ ಹೈಕೋರ್ಟಿನಲ್ಲೂ ಇದನ್ನು ಪ್ರಶ್ನಿಸುತ್ತೇವೆ ಎಂದು ತಿಳಿಸಿದರು.

ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದೆಯೇ ಎಂದು ಕೇಳಿದರು. ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸಿದ್ದೀರಿ; ಅಲ್ಪಸಂಖ್ಯಾತರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ ಎಂದು ಕೇಳಿದರು.

ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ ಎಂದು ಟೀಕಿಸಿದರು. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರಕಾರ ಎಂದು ವಿವರಿಸಿದರು.

ಕೇಂದ್ರ ಸರಕಾರದ ನರೇಂದ್ರ ಮೋದಿಜೀ ಅವರ ಸರಕಾರ ನೀಡಿದ ಕಾರ್ಯಕ್ರಮಗಳು, ಜನ್‍ಧನ್ ಖಾತೆ, ಉಜ್ವಲ ಸೇರಿ ಅನೇಕ ಯೋಜನೆಗಳನ್ನು ಕೊಟ್ಟಿದ್ದು, ಅವನ್ನು ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆ ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ ಎಂದು ಗಮನ ಸೆಳೆದರು.

ಈ ದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಮೋದಿಜೀ ಅವರ ಸರಕಾರ ಕಾರ್ಯಕ್ರಮಗಳನ್ನು ನೀಡಿದೆ. ಬಿಜೆಪಿ, ಕಾಂಗ್ರೆಸ್ಸಿನವರ ಮಾದರಿಯಲ್ಲಿ ಮುಸಲ್ಮಾನರನ್ನು ಮತಬ್ಯಾಂಕಿಗೆ ಸೀಮಿತ ಮಾಡಿಲ್ಲ; ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ. ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿಯನ್ನು ನಾವು ಸ್ಪಷ್ಟವಾಗಿ ವಿರೋಧ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸದನದ ಒಳಗೆ ಮತ್ತು ಹೊರಗಡೆ Àಹೋರಾಟದ ರೂಪುರೇಷೆ ಸಂಬಂಧ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಸರ್ಕಾರಿ ಶಾಲೆಗಳಿಗೆ ಲಕ್ಷಾಂತರ ರೂ.ವೆಚ್ಚದ ಮೂಲಸೌಕರ್ಯ ಕಲ್ಪಿಸಿದ ‘ಶಿಲ್ಪಾ ಫೌಂಡೇಶನ್‌’: ಸಾರ್ವಜನಿಕರಿಂದ ಶ್ಲಾಘನೆ

ಮಾ.22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ‘ಅಖಂಡ ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ | Karnataka Bundh

Share. Facebook Twitter LinkedIn WhatsApp Email

Related Posts

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

1 Min Read

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

1 Min Read

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

4 Mins Read
Recent News

​ಮಾದಕ ದ್ರವ್ಯ ಮುಕ್ತ ಭಾರತಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್: 3 ವರ್ಷಗಳ ಭಾರಿ ಅಭಿಯಾನಕ್ಕೆ ಸಿದ್ಧತೆ!

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

BREAKING: ​ಪಾಟ್ನಾದಲ್ಲಿ ಖಾನ್ ಸರ್ ಕೋಚಿಂಗ್ ಸೆಂಟರ್ ಮೇಲೆ ಗುಂಡಿನ ದಾಳಿ; ಭದ್ರತಾ ಸಿಬ್ಬಂದಿಗೆ ಗಾಯ

​ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಮೆರಿಕದಿಂದ ತಕ್ಕ ಪ್ರತ್ಯುತ್ತರ, ಖೆಶ್ಮ್ ದ್ವೀಪದ ಮೇಲೆ ದಾಳಿ!

State News
KARNATAKA

BREAKING : ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗುತ್ತಿದ್ದು, ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ.…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ.!

BREAKING : ವಾಹನ ಸವಾರರೇ ಗಮನಕ್ಕೆ: ಸಿಎಂ ಪ್ರಮಾಣ ವಚನ ಹಿನ್ನೆಲೆ ಇಂದು ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ!

BREAKING : ಇಂದು ಬೆಳಗ್ಗೆ 10 ಗಂಟೆಗೆ ಹೈಕಮಾಂಡ್‌ ನಿಂದ ಸಚಿವರ ಪಟ್ಟಿ ರಿಲೀಸ್: ಸಿಎಲ್‌ಪಿ ನಾಯಕ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.