Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಕ್ಫ್‌ ಮಂಡಳಿ ಮಾಡುತ್ತಿರುವ ಲ್ಯಾಂಡ್‌ ಜಿಹಾದ್‌ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ: ಆರ್‌.ಅಶೋಕ್
KARNATAKA

ವಕ್ಫ್‌ ಮಂಡಳಿ ಮಾಡುತ್ತಿರುವ ಲ್ಯಾಂಡ್‌ ಜಿಹಾದ್‌ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ: ಆರ್‌.ಅಶೋಕ್

By ವಸಂತ ಬಿ ಈಶ್ವರಗೆರೆ

ಚಿಕ್ಕಬಳ್ಳಾಪುರ: ವಕ್ಫ್‌ ಮಂಡಳಿ ಮಾಡುತ್ತಿರುವ ಲ್ಯಾಂಡ್‌ ಜಿಹಾದ್‌ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸಂಸದ ಡಾ.ಕೆ.ಸುಧಾಕರ್‌ ಅವರೊಂದಿಗೆ ಆರ್‌.ಅಶೋಕ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕರ್ನಾಟಕದ ವಕ್ಫ್‌ ಬೋರ್ಡ್‌ ತಿಮಿಂಗಿಲದಂತಿದೆ. ಇದು ದೇವಸ್ಥಾನ, ಶಾಲೆ, ಕೃಷಿ ಜಮೀನುಗಳನ್ನು ನುಂಗಿ ಹಾಕುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಎಂದು ಹೇಳಿದ್ದರೂ, ವಕ್ಫ್‌ ಮಂಡಳಿಗೆ ಮಾತ್ರ ಪ್ರತ್ಯೇಕ ಸಂವಿಧಾನವಿದೆ. ಬೌದ್ಧರು, ಕ್ರೈಸ್ತರಿಗೆ ಇಲ್ಲದ ನ್ಯಾಯಾಂಗದ ಅಧಿಕಾರ ವಕ್ಫ್‌ ಮಂಡಳಿಗಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ ವರ್ತಿಸುತ್ತಿದೆ ಎಂದರು.

ಕಂದವಾರದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಕಬಳಿಸಿದೆ. ಅಲ್ಲಿನ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಿದರೆ, ಶಾಲಾ ಮಕ್ಕಳು ಯಾವ ಪ್ರಾರ್ಥನೆ ಮಾಡಬೇಕು? ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಹಸಿರು ಬಾವುಟ ಹಾರಿಸಲಾಗಿದೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ವಕ್ಫ್‌ ಮಂಡಳಿಗೆ ಇಂತಹ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ ಎಂದು ದೂರಿದರು.

ವಕ್ಫ್‌ ಮೂಲಕ ಸರ್ಕಾರ ಹಿಂದೂಗಳ ಜಮೀನುಗಳನ್ನು ಕಬಳಿಸುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಹಾಳಾದರೆ ಅದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಈ ಹೋರಾಟಕ್ಕೆ ಹೆದರಿ ಸರ್ಕಾರ ಪಹಣಿಯಲ್ಲಿ ಬದಲಾವಣೆ ತರುತ್ತಿದೆ. ಲ್ಯಾಂಡ್‌ ಜಿಹಾದ್‌ ವಿರುದ್ಧ ಹೋರಾಟ ನಡೆಸುತ್ತಿದ್ದು, ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ ಎಂದು ಹೇಳಿದರು.

ರೇಷನ್‌ ಕಾರ್ಡ್‌ ರದ್ದು ನಿಲ್ಲಿಸಿ

ಎಲ್ಲರಿಗೂ ಫ್ರೀ ಎಂದು ಹೇಳಿ, ರೇಷನ್‌ ಕಾರ್ಡ್‌ ರದ್ದುಪಡಿಸಲಾಗುತ್ತಿದೆ. 11-12 ಲಕ್ಷ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಗುಡಿಸಲಲ್ಲಿ ವಾಸಿಸುವ ಜನರ ಪಡಿತರ ಚೀಟಿ ಕೂಡ ರದ್ದಾಗಿದೆ. ಗ್ಯಾರಂಟಿಯಿಂದಾಗಿ ಖಜಾನೆ ಖಾಲಿಯಾಗಿ ಶಾಸಕರು ದಂಗೆ ಏಳುತ್ತಿದ್ದಾರೆ. ಅದಕ್ಕಾಗಿ ಹಣ ಉಳಿಸಲು ರೇಷನ್‌ ಕಾರ್ಡ್‌ ರದ್ದು ಮಾಡಲಾಗುತ್ತಿದೆ. ಕಾರ್ಡು ರದ್ದು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಅವರು ಹೇಳುವುದೆಲ್ಲ ಸುಳ್ಳಾಗುತ್ತಿದೆ. ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಕೂಡಲೇ ಕಾರ್ಡು ರದ್ದು ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಕಾರ್ಡು ಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅವರನ್ನು ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದರು.

ನಾನು ಕಂದಾಯ ಸಚಿವನಾಗಿದ್ದಾಗ ಹಾಡಿಗಳಿಗೆ ಹೋಗಿ ರೈತರ ಜಮೀನು ಕಾಪಾಡಿದ್ದೆ. ಅರಣ್ಯ ಸಚಿವರು ಎಚ್‌ಎಂಟಿ ಜಮೀನು ಬಗ್ಗೆ ಮಾತಾಡಿದ್ದಾರೆ. ಅಂದಿನ ಪ್ರಧಾನಿ ಜವಹರಲಾಲ್‌ ನೆಹರೂ ಆ ಜಾಗವನ್ನು ಎಚ್‌ಎಂಟಿಗೆ ನೀಡಿದ್ದರು. ಅರಣ್ಯ ಸಚಿವರು ಇದನ್ನು ಅರಣ್ಯ ಭೂಮಿ ಎನ್ನುತ್ತಿದ್ದಾರೆ. ಯಾವ ಭೂಮಿ ಯಾವುದು ಎಂದು ಅವರು ಮೊದಲು ತಿಳಿದುಕೊಳ್ಳಲಿ ಎಂದರು.

21,000 ಆಸ್ತಿಗಳನ್ನು ನಮ್ಮದು ಎಂದು ವಕ್ಫ್‌ ಘೋಷಿಸಿದೆ. 1994 ರಲ್ಲಿ ಇದಕ್ಕೆ ಸಂಬಂಧಿಸಿದಂತೆ ಒಂದು ಅಧಿಸೂಚನೆ ಮಾಡಲಾಗಿದೆ. ಅದನ್ನು ರದ್ದು ಮಾಡಬೇಕಿದೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಮಂಡಳಿಗೆ ಪರಮಾಧಿಕಾರ ನೀಡಿದರು. ಇಂತಹ ಅಧಿಕಾರವನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

ನೈಸರ್ಗಿಕ ವಿಪತ್ತು ನಿರ್ವಹಣೆ: ಒಡಿಶಾದಲ್ಲಿ ರಿಲಯನ್ಸ್ ಫೌಂಡೇಶನ್ – ಯುಎನ್ ಇಂಡಿಯಾ ಸಭೆ

ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ

Share. Facebook Twitter LinkedIn WhatsApp Email

Related Posts

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

2 Mins Read

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

1 Min Read

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

1 Min Read
Recent News

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

State News
KARNATAKA

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸಿನಿಮಾ ಮತ್ತು ಕಿರುತೆರೆಯ ತಾರೆಯರು ರಾಜಕೀಯದತ್ತ ಮುಖ ಮಾಡುವುದು ಹೊಸದೇನಲ್ಲ. ಇದೀಗ ಆ ಸಾಲಿಗೆ ಕನ್ನಡ ಕಿರುತೆರೆಯ ಜನಪ್ರಿಯ…

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಧರ್ಮ ಸಂರಕ್ಷಣೆಯಲ್ಲಿ ಮಾತೆಯರ ಪಾತ್ರ ಮಹತ್ವದ್ದು:ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.