ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ; ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೇಳಿದರು.
ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕರಿಯ ಎಂದವರ ಬಗ್ಗೆ ಎಫ್‍ಐಆರ್ ಆಗಿದೆಯೇ? ಎಂದು ಕೇಳಿದರು. ವಕ್ಫ್ ವಿಚಾರದಲ್ಲಿ ರೈತರಿಗೆ ಆಗಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಅವತ್ತು ಒಂದು ಮಾತನ್ನಾಡಿದ್ದರು. ಅದಕ್ಕೆ ಅವರು ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಿದ್ದಾರೆ. ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ ಮೇಲೆ ಇನ್ನೇನಿದೆ ಎಂದು ಪ್ರಶ್ನಿಸಿದರು.
ನಿಮ್ಮ ಪಕ್ಕದಲ್ಲೇ ನಿಂತು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ. ಮಾಡಿದ ತಪ್ಪಿಗೆ ಆಕ್ರೋಶ ವ್ಯಕ್ತವಾದಾಗ, ಕ್ಷಮೆ ಕೇಳಿದ ಮೇಲೂ ಕ್ರಮ ಜರುಗಿಸುವುದಾದರೆ ದ್ವಿಮುಖ ನೀತಿ ನಿಮ್ಮದಲ್ಲವೇ? ಓಲೈಕೆ ನೀತಿ ಮೂಲಕ ಹಿಂದೂಗಳು, ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು. ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ. ಸರಕಾರದ ಅನ್ಯಾಯಗಳ ವಿಷಯವನ್ನು ಜನರಿಗೆ ಎತ್ತಿ ತೋರಿಸುವ ಕೆಲಸವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ
BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!