ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಮತ್ತೊಮ್ಮೆ ವಿಶ್ವವಂದ್ಯ ನಾಯಕರಾದ ನರೇಂದ್ರ ಮೋದಿಜೀ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಪ್ರಚಾರ ಕಾರ್ಯಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂಸ್ಫೂರ್ತಿಯಿಂದ ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಮೇ 5ರ ಬೆಳಿಗ್ಗೆ ಪ್ರಚಾರ ಪ್ರಮುಖರು ಸಾಮಾಜಿಕ ಕಾರ್ಯಕರ್ತರ ಮನೆಯಲ್ಲಿ ಉಪಾಹಾರ ಮಾಡಲಿದ್ದಾರೆ. ಬಳಿಕ ಸ್ಥಳೀಯ ಪ್ರಮುಖ ಮಹನೀಯರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸುವರು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿಗಳನ್ನು ಆಯೋಜಿಸಲಾಗುವುದು. ಮನೆ ಮನೆಗಳ ಸಂಪರ್ಕ, ಬೈಕ್ ರ್ಯಾಲಿ ಮತ್ತು ಪಾದಯಾತ್ರೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋóಷಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ಮೈಸೂರು ಅಭ್ಯರ್ಥಿ ಯದುವೀರ್ ಒಡೆಯರ್, ಮಾಜಿ ಸಚಿವ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನೀಲ್ ಕುಮಾರ್, ಪಿ.ರಾಜೀವ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರನ್ನು ಒಳಗೊಂಡಂತೆ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು ಕಾರ್ಯಕರ್ತರ ಜೊತೆ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿವಿಧ ಮಂಡಲಗಳಲ್ಲೂ ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸದಸ್ಯರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ದೃಷ್ಟಿಯಿಂದ ಕೊನೆಯ ದಿನದ ಪ್ರಚಾರಕ್ಕೆ ಈ ರೀತಿಯ ಯೋಜನೆಗಳನ್ನು ಹಾಕಿಕೊಂಡು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಶಿಕ್ಷಕರು, ಪದವೀಧರರೇ ಗಮನಿಸಿ: ಮೇ.6ರವರೆಗೆ ‘ಮತದಾರರ ನೋಂದಣಿ’ಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ

ರಾಜ್ಯದ ಶಿಕ್ಷಕರು, ಪದವೀಧರರೇ ಗಮನಿಸಿ: ಮೇ.6ರವರೆಗೆ ‘ಮತದಾರರ ನೋಂದಣಿ’ಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ

Share.
Exit mobile version