ಮಂಡ್ಯ: ಜಿಲ್ಲೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಂತ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಬಿಜೆಪಿ ಕಾರ್ಯಕರ್ತನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಂಡ್ಯದಲ್ಲಿ 2022ರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದರು. ಈ ಪ್ರಕರಣವನ್ನು ರೀ ಓಪನ್ ಮಾಡಿ, ಬಂಧಿಸೋದಾಗಿ ಸಿಎಂ ಸಿದ್ಧರಾಮಯ್ಯ ಕೂಡ ಹೇಳಿದ್ದರು.
ಈ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಂತ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು ಮಾಡಿದೆ.
ಅಂದಹಾಗೇ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕ್ ಪರವಾಗಿ ಘೋಷಣೆ ಕೂಗಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿದೆ.
ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸತತ 9 ಗಂಟೆ ಪರಿಶೀಲನೆ ನಡೆಸಿದ ‘NIA’