ಬೆಂಗಳೂರು: ವೀಡಿಯೋ ಪೋಸ್ಟ್ ಮಾಡಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಆನೇಕಲ್ ನಲ್ಲಿ ನಡೆದಿದೆ.
ಬೆಂಗಳೂರಿನ ಆನೇಕಲ್ ನ ಎಸ್ ವಿ ಎಂ ಸ್ಕೂಲ್ ಬಳಿಯಲ್ಲಿ ವೀಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಈ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ ಪಿ ನಾಗರಾಜ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ ವಿ ಎಂ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಪ್ರವೀಣ್ ಸಾವಿಗೆ ಕಾರಣರಾದವರನ್ನು ಬಂಧಿಸಬೇಕೆಂದು ಮನವಿಯನ್ನು ಹೆಚ್ಚುವರಿ ಎಸ್ ಪಿ ನಾಗರಾಜ್ ಅವರಿಗೆ ಪ್ರವೀಣ್ ಸಹೋದರಿ ಮನವಿ ಮಾಡಿದರು.
ಪೋಷಕರೇ ಗಮನಿಸಿ : ಕೇಂದ್ರೀಯ ವಿದ್ಯಾಲಯ 2ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ