ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಪ್ರವೀಣ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸಾಂತ್ವನ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಾಹ್ನ ಮಂಗಳೂರಿಗೆ ತೆರಳಲಿದ್ದಾರೆ. 3.30 ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೆಳ್ಳಾರೆ ಪ್ರವೀಣ್ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿಯಾಗಲಿದ್ದಾರೆ. ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಅರಗ ಜ್ಞಾನೇಂದ್ರ ಸಾಥ್ ನೀಡಲಿದ್ದಾರೆ. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಿಎಂ ಸಾಂತ್ವನ ಹೇಳಲಿದ್ದು, ಬಳಿ ವಿಶೇಷ ಪರಿಹಾರ ಘೋಷಣೆ ಮಾಡುವ ಸಾಧ್ಯತೆಯಿದೆ.