ಬೆಂಗಳೂರು: ದಸರಾ ಹಬ್ಬದ ನಂತರ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿದೆ. ಶುಕ್ರವಾರದಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಿದೆ.
ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ , ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಮುಂತಾದವರು ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪಾಲಿಗೆ ರಾರಕೀಯವಾಗಿ ಮಹತ್ವದ್ದಾಗಿರುವ ಪ್ರವಾಸದ ದಿನಾಂಕ ನಿಗದಿಯಾಗುವುದ ಬಹುತೇಕ ಖಚಿತವಾಗಿದೆ.