ಚಿಕ್ಕಮಗಳೂರು: ಮಂಗಳೂರು ಜಿಲ್ಲೆ ಪುತ್ತೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಯಾಗಿದ್ದ ಹಿನ್ನೆಲೆ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
BREAKING NEWS: ವಿಜಯ್ ಚೌಕ್ ನಲ್ಲಿ ಕಾಂಗ್ರೆಸ್ ಸಂಸದರು, ಪೊಲೀಸರ ನಡುವೆ ವಾಗ್ವಾದ; ಮಹಿಳಾ ಕಾರ್ಯಕರ್ತೆಯ ಬಂಧನ
ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧವೇ ಸದಸ್ಯರು ಆಕ್ರೋಶ ಹೊರಗೆ ಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಲಿದ್ದಾರೆ.