ಬಾಗಲಕೋಟೆ: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಹಿನ್ನೆಲೆ ರಾಜ್ಯ ಸರಾಕರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜನಾಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯಲ್ಲಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ರಾಜೀನಾಮೆ ನೀಡಿದ್ದಾರೆ.
BIG BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ : 7 ಮಂದಿ SDPI ಕಾರ್ಯಕರ್ತರು ಪೊಲೀಸರ ವಶಕ್ಕೆ
ಸಾಮೂಹಿಕ ರಾಜೀನಾಮೆ ಪತ್ರ ಕಳುಹಿಸುತ್ತಿರುವ ಕಳುಹಿಸುತ್ತಿದ್ದಾರೆ. ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲೆ ಪಕ್ಷದ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರ ಕಗ್ಗೊಲೆ ನಡೆಯುತ್ತಿದೆ.
ಕಠಿಣ ಕ್ರಮ ಎನ್ನುವ ಸಿದ್ದ ಉತ್ತರ ಕೇಳಿ ಕೇಳಿ ಸಾಕಾಗಿದೆ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. ಯುವ ಮೋರ್ಚಾ, ಒಬಿಸಿ ಮೋರ್ಚಾ, ಸಾಮಾಜಿಕ ಜಾಲತಾಣ ಸೇರಿ 12 ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲಗೆ ಪತ್ರ ಕಳುಹಿಸುತ್ತಿದ್ದು, ಸರ್ಕಾರದ ವಿರುದ್ದ, ಬಿಜೆಪಿ ಶಾಸಕರು, ಸಚಿವರು ವಿರುದ್ಧ ಕೆಂಡಾಮಂಡಲರಾಗಿದ್ದಾರೆ.