ಬೈಕೆರೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆ ಹೆಚ್ಚು ಎನ್ನುವಂತ ಬಿಜೆಪಿಯ ಆರೋಪ ನಿರಾಧಾರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೈಕೆರೆ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರು ಮಂಗಳೂರು ಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಹಂತಕರಿಗೆ, ದರೋಡೆಕೋರರಿಗೆ, ವಂಚಕರಿಗೆ ಜಾತಿ, ಧರ್ಮ ಇರುವುದಿಲ್ಲ. ಕಾನೂನಿನ ರೀತ್ಯ ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಕಾಂಗ್ರೆಸ್ ಕಾರ್ಯಕಾಲದಲ್ಲಿ ಹಿಂದೂಗಳ ಹತ್ಯೆ ಹೆಚ್ಚುತ್ತದೆ ಎಂಬ ಬಿಜೆಪಿ ಆರೋಪ ನಿರಾಧಾರವಾದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು.
ಜಾತಿಗಣತಿ- ಸಂಪುಟದಲ್ಲಿ ಅಭಿಪ್ರಾಯ ಮಂಡನೆ:
ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಅದು ಕೇವಲ ಜಾತಿ ಗಣತಿ ಆಗದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ನೆಲೆಯಲ್ಲಿ ನಡೆಯಬೇಕು. ಆಗ ಮಾತ್ರ ವಂಚಿತರಿಗೆ ನ್ಯಾಯ ಸಿಗಲು ಸಾಧ್ಯ ಎಂದರು.
ರಾಜ್ಯ ಸಚಿವ ಸಂಪುಟದಲ್ಲಿ ಮಂಡಿಸಲಾಗಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತಂತೆ 9ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ತಮ್ಮ ಅಭಿಪ್ರಾಯ ಮಂಡಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ
ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ