ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ನ ಚೋಂಬು ಅಸ್ತ್ರಕ್ಕೆ ಬಿಜೆಪಿ ಪ್ರತ್ಯಾಸ್ತ್ರ ನೀಡಿದ್ದು, ಕಾಂಗ್ರೆಸ್ ಡೇಂಜರ್ ಎಂಬ ಜಾಹೀರಾತು ನೀಡಿದೆ.
ಕಾಂಗ್ರೆಸ್ ನ ಚೊಂಬು ಜಾಹೀರಾತಿಗೆ ತಿರುಗೇಟು ನೀಡಿರುವ ಬಿಜೆಪಿ ಇಂದು ಕಾಂಗ್ರೆಸ್ ಡೇಂಜರ್ ಎಂಬ ಜಾಹೀರಾತು ನೀಡಿದೆ. ಜಾಹೀರಾತಿನಲ್ಲಿ ಪ್ರಮುಖ ಒಂಭತ್ತು ವಿಷಯಗಳನ್ನು ಪ್ರಸ್ತಾಪ ಮಾಡಿದೆ.
ದಲಿತರ ಕಲ್ಯಾಣಕ್ಕಾಗಿಯೇ ಮೀಸಲಾಗಿದ್ದ ಹಣ ಅನ್ಯರ ಪಾಲಾಗಬೇಕಾ?
ಆಟೋದಲ್ಲಿ ಹೋದ ಪ್ರಯಾಣಿಕರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಬಲಿಯಾಗಬೇಕಾ?
ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಕೋರರನ್ನು ಓಲೈಸುವವರು jera?
ಕನ್ನಡಿಗರ ಪಾಲಿನ ಕಾವೇರಿ ನೀರು ಬೇರೆ ರಾಜ್ಯಕ್ಕೆ ಸೇರಬೇಕಾ?
ವಿಧಾನಸೌಧಕ್ಕೆ ಹೋದಾಗ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಬೇಕಾ?
ಹೋಟೆಲ್ ಗೆ ಟೀ ಕುಡಿಯಲು ಹೋದ ಅಮಾಯಕರು ಬಾಂಬ್ ಸ್ಫೋಟಕ್ಕೆ
ಕಾಲೇಜಿಗೆ ಹೋದ ಹೆಣ್ಣುಮಗಳು ಲವ್ ಜಿಹಾದ್ ಗೆ ಬಲಿಯಾಗಬೇಕಾ?
ಮುಗ್ಧಜನರು ನಕ್ಸಲರಿಗೆ ಬಲಿಯಾಗುವುದನ್ನು ನೋಡಬೇಕಾ?
ಮೇಯಲು ಹೋದ ಗೋ ಮಾತೆ ಕಸಾಯಿಖಾನೆ ಸೇರಬೇಕಾ?