ಬೆಂಗಳೂರು: ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ ಸಹೋದ್ಯೋಗಿ ಸಚಿವರಿಂದಲೇ ಮಾಹಿತಿ ಸಿಕ್ಕರೂ ಲೋಪ ಸರಿಪಡಿಸದ ಸಹಕಾರಿ ಸಚಿವರಿಂದ ರೈತರಿಗೆ ಇನ್ಯಾವ ನ್ಯಾಯ ಸಿಗಬಲ್ಲದು? ಟೇಕಾಫ್ ಆಗದ ಬಿಜೆಪಿಯ ಡಬಲ್ ಇಂಜಿನ್‌ನನ್ನು ಈಗ ತಳ್ಳಲಾಗುತ್ತಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Congress ) ವ್ಯಂಗ್ಯವಾಡಿದೆ.

ಈ ಕುರಿತಂತೆ ಟ್ವಿಟ್ ಮಾಡಿದ್ದು, ‘ತಳ್ಳಿದರೆ ಸಾಕು ಇನ್ನೆಂಟು ತಿಂಗಳು ಅಂತ ತಳ್ತಾ ಇದೀವಿ ಅಷ್ಟೇ’ ಇದು ಸಚಿವ ಮಾಧುಸ್ವಾಮಿಯವರ ಅಸಹಾಯಕತೆಯೋ, ತಮ್ಮದೇ ಸರ್ಕಾರದ ವಿರುದ್ದದ ಆರೋಪವೋ? ಬಸವರಾಜ ಬೊಮ್ಮಾಯಿ ಅವರ ಅಡಳಿತದ ವಿರುದ್ಧ ಅಸಮಾಧಾನವೊ ಬಿಜೆಪಿ ? ಕೆಟ್ಟು ನಿಂತಿರುವ ‘ಡಬಲ್ ಇಂಜಿನ್’ ಸರ್ಕಾರವು ತಳ್ಳಿಕೊಂಡು ಹೋಗುವ ದೈನೇಸಿ ಸ್ಥಿತಿಗೆ ಬಂದಿರುವುದು ದುರಂತ ಎಂಬುದಾಗಿ ಹೇಳಿದೆ.

‘ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವುದು ಭ್ರಷ್ಟಾಚಾರದ ಮ್ಯಾನೇಜ್ಮೆಂಟ್ ಮಾತ್ರ. ಬಸವರಾಜ ಬೊಮ್ಮಾಯಿ ಅವರ ನಿಷ್ಕ್ರೀಯ ಆಡಳಿತಕ್ಕೆ, ರೈತರಿಗಾಗುತ್ತಿರುವ ಅನ್ಯಾಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದೆ.

Share.
Exit mobile version