ಬೆಂಗಳೂರು: : ರಾಜ್ಯ ರಾಜಕೀಯದಲ್ಲಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹಸ್ತಕ್ಷೇಪ ಖಚಿತವಾಗಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಬಿಜೆಪಿ ಹೋರಾಟಕ್ಕೂ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.