Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ : ಸಿಎಂ ಸಿದ್ದರಾಮಯ್ಯ
KARNATAKA

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ : ಸಿಎಂ ಸಿದ್ದರಾಮಯ್ಯ

By kannadanewsnow0703/01/2024 10:59 AM

ಬೆಂಗಳೂರು: ನಾಲ್ಕು ವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಅಂತ ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯ ಪ್ರಮುಖ ಮಾಹಿತಿಗಳು ಇಲ್ಲಿವೆ.

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ?

ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ.

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ?

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ.

ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ.

Bjp's illegal behaviour is responsible for increase in criminal activities in the state: Siddaramaiah ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.