ಬೆಂಗಳೂರು : ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿ, ಆಡಳಿತದಲ್ಲಿ ನಂಬಿಕೆಯಿಟ್ಟು ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆಂದು ಎಂದಿದ್ದಾರೆ
ಮಾಧ್ಯಮದೊಂದಿಗೆ ಮಾತನಾಡಿ, ಗುಜರಾತ್ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರೋ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಗುಜರಾತ್ ಜನರು ಮೋದಿ ನಾಯಕತ್ವ, ಗುಜರಾತ್ ಸರ್ಕಾರದ ಆಡಳಿತದಲ್ಲಿ ನಂಬಿಕೆಯಿಟ್ಟು ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಹೀಗಾಗಿ ವೈಯಕ್ತಿಕವಾಗಿ ಹಾಗೂ ಪಕ್ಷದ ಪರವಾಗಿ ನಾನು ಗುಜರಾತ್ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜೊತೆಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ಕಾಣುವಂತದ್ದು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.