ಕೆಎನ್ಎನ್ ಡಿಜಿಟಲ್ ಡೆಸ್ಕ್ : ಬಿಜೆಪಿ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಲು ಕೋವಿಡ್ ಅನ್ನು ತಂತ್ರವಾಗಿ ಬಳಸುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವೆಲ್ಲವೂ ಯಾತ್ರೆಯನ್ನು ನಿಲ್ಲಿಸುವ ಬಿಜೆಪಿಗೆ ನೆಪ ಮಾತ್ರ. ಅವರು ನಮ್ಮನ್ನು ತಡೆಯಲು ಬಯಸುತ್ತಿದ್ದಾರೆ. ಭಾರತದ ಶಕ್ತಿಗೆ ಎಲ್ಲರೂ ಹೆದರುತ್ತಾರೆ. ನಾವು ನೂರು ದಿನಗಳಿಂದ ನಡೆದುಕೊಂಡು ಬಂದಿದ್ದೇವೆ. ಹಿಂದೂಗಳು, ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್ನರು, ಮಹಿಳೆಯರು, ಪುರುಷರು ಮತ್ತು ಮಕ್ಕಳು ಎಲ್ಲರೂ ನಮ್ಮೊಂದಿಗೆ ಸೇರಿಕೊಂಡಿದ್ದಾರೆ. ಯಾತ್ರೆಯು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲಿದೆ ಎಂದು ರಾಗಾ ಹೇಳಿದ್ದಾರೆ.
ಬುಧವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ,ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದರು. ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಮಾಸ್ಕ್ , ಸ್ಯಾನಿಟೈಸರ್ ಗಳನ್ನು ಬಳಸಬೇಕು ಎಂದು ಹೇಳಿದ್ದರು.
#WATCH | …It's their (BJP) new idea, they wrote a letter to me saying COVID is coming & stop the Yatra. All these are excuses to stop this Yatra, they are scared of India's truth: Rahul Gandhi on Union Health min's letter pertaining to Covid protocols in Bharat Jodo Yatra pic.twitter.com/BCzziH2n06
— ANI (@ANI) December 22, 2022
ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನಿಸಿದ ಸಚಿವರು, ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ರಾಷ್ಟ್ರೀಯ ಹಿತಾಸಕ್ತಿಯಿಂದ ಯಾತ್ರೆಯನ್ನು ಮುಂದೂಡಬೇಕು. ಲಸಿಕೆ ಹಾಕಿಸಿಕೊಂಡವರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಬೇಕು. ಕೋವಿಡ್ ನಿಯಮಗಳನ್ನು ಅನುಸರಿಸಿ ಅಥವಾ ಯಾತ್ರೆಯನ್ನು ನಿಲ್ಲಿಸಿ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.
ಪತ್ರಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಕೇಂದ್ರವು ಭಾರತ್ ಜೋಡೋ ಯಾತ್ರೆಯ ಯಶಸ್ಸನ್ನು ಸಹಿಸಿಕೊಳ್ಳದೆ ಕೇಂದ್ರ ಕ್ರಮಕ್ಕೆ ಮುಂದಾಗಿದೆ. ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ಬಿಜೆಪಿಯ ರ್ಯಾಲಿಗಳ ಸಂಘಟಕರಿಗೆ ಆರೋಗ್ಯ ಸಚಿವರು ಪತ್ರಗಳನ್ನು ಕಳುಹಿಸಿದ್ದಾರೆಯೇ ಎಂದು ಪ್ರಶ್ನಿಸಿತ್ತು.
BIGG NEWS: ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದಲ್ಲಿ ಕಳ್ಳರ ಕೈಚಳಕ; 25 ಮೊಬೈಲ್ ಫೋನ್ ಕದ್ದ ಖದೀಮರು