ನವದೆಹಲಿ: ಮುಡಾ ಅಕ್ರಮ ಸೇರಿದಂತೆ ವಿವಿಧ ರಾಜ್ಯ ಸರ್ಕಾರದ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಯೂ ಟರ್ನ್ ಹೊಡೆದಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅತೃಪ್ತಿಯನ್ನು ಹೊರಹಾಕಿದ್ದಾರೆ.
ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಖಾರವಾಗಿ ಪ್ರತಿಕ್ರಿಯಿಸಿದ ಅವರು; ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.
ಇಡೀ ಮಳೆ, ನೆರೆ, ಭೂ ಕುಸಿತ, ಬೆಳೆನಾಶದಿಂದ ತತ್ತರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪಾದಯಾತ್ರೆ ಮಾಡಿದರೆ ಜನರಿಂದ ಟೀಕೆಗಳು ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಇಲ್ಲಿ ಕಾನೂನು ಹೋರಾಟ ಮಾಡುವುದು ಮುಖ್ಯ. ಕೇವಲ ರಾಜಕೀಯವೇ ನಮಗೆ ಇಲ್ಲಿ ಮುಖ್ಯವಲ್ಲ. ಹೀಗಾಗಿ ನಾವು ಪಾದಯಾತ್ರೆಗೆ ನೈತಿಕ ಬೆಂಬಲವನ್ನೂ ನೀಡುವುದಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರಿನಿಂದ ಮೈಸೂರುವರೆಗೂ ನಮ್ಮ ಪಕ್ಷಕ್ಕೆ ಶಕ್ತಿ ಇದೆ. ನಮ್ಮನ್ನೇ ಪರಿಗಣಿಸಿದಿದ್ದರೆ ಹೇಗೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.
ಈ ವಿಜಯದಲ್ಲಿ ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಪಾದಯಾತ್ರೆಗೆ ಬೆಂಬಲ ಕೊಡಬೇಕು ಎನ್ನುವುದು ಪ್ರಶ್ನೆ. ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವುಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಬಿಡದಿಯಿಂದ ಮೈಸೂರುವರೆಗೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಮಂಡ್ಯ, ಮೈಸೂರು ಭತ್ತದ ನಾಟಿ ಶುರುವಾಗಿದೆ. ಬಿಜೆಪಿ ನಾಯಕರು ಪೂರ್ವ ಸಿದ್ದತೆ ಮಾಡಿಕೊಂಡಿದ್ದರು. ಎಲ್ಲವನ್ನೂ ಅಂತಿಮಗೊಳಿಸಿದ ನಂತರ ನಮಗೂ ಮಾಹಿತಿ ಇರಲಿ ಎಂದು ಸಭೆಗೆ ಕರೆದು ಹೇಳಿದ್ದಾರಷ್ಟೇ. ಇದು ಸೂಕ್ತ ಸಂದರ್ಭ ಅಲ್ಲ ಹಾಗಾಗಿ ಹಿಂದೇ ಸರಿದ್ದೇವೆ. ಜನಸಮಾನ್ಯರ ಭಾವನೆ ಮುಖ್ಯ. ಇದಕ್ಕೆ ನಮ್ಮ ನೈತಿಕ ಬೆಂಬಲವೂ ಇಲ್ಲ ಎಂದು ಅವರು ಹೇಳಿದರು.
ಕೋಲಾರ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ ಅವರು ಸಚಿವರ ಜತೆಯಲ್ಲಿ ಇದ್ದರು.
ಭಾರತದ ಜೈವಿಕ ತಂತ್ರಜ್ಞಾನ ಹೂಡಿಕೆಗಳಲ್ಲಿ ಕರ್ನಾಟಕದ್ದು ಶೇ.21ರಷ್ಟು ಕೊಡುಗೆ: ಸಚಿವ ಪ್ರಿಯಾಂಕ್ ಖರ್ಗೆ
BREAKING : ಪ್ಯಾರಿಸ್ ಒಲಿಂಪಿಕ್ : ಸಿಂಧು ಬಳಿಕ 16ನೇ ಸುತ್ತಿಗೆ ‘ಲಕ್ಷ್ಯ ಸೇನ್’ ಲಗ್ಗೆ |Paris Olympic 2024