ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ನಗರದ ಹೋಟೆಲ್ ನಿಂದ ಹೊರಗೆ ಬುರತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
BIGG NEWS: ಹುಬ್ಬಳ್ಳಿಯಲ್ಲಿ ಮತ್ತೆ ಕೇಳಿಬಂದ `ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ’ ಘೋಷಣೆ
ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನ ಸೇರುತ್ತಿಲ್ಲ. ಆದರೆ ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನಿಟ್ಟು ಬೀಗ ಹಾಕಿ ಕಟ್ಟಿಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
BIGG NEWS: ಹುಬ್ಬಳ್ಳಿಯಲ್ಲಿ ಮತ್ತೆ ಕೇಳಿಬಂದ `ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ’ ಘೋಷಣೆ
ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ನನಗೆ ಗೊತ್ತಿರುವಂತೆ ಸಂವಿಧಾನದ ಆರ್ಟಿಕಲ್ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮೂದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದು ತಿಳಿಸಿದ್ದಾರೆ.