ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬುರತ್ತಿದ್ದಂತೆ ಅದರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದೀಗ ಆಕಾಂಕ್ಷಿಗಳು ಟಿಕೆಟ್ಗಾಗಿ ಭರ್ಜರಿ ಲಾಬಿ ನಡೆಸಿದ್ದಾರೆ.
ಇದರ ಮಧ್ಯೆ ಸೈಲೆಂಟ್ ಆಗಿ ಪಕ್ಷಾಂತರ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ಅಷ್ಟೇ ಬಿಜೆಪಿ ಸೇರ್ಪಡೆಯಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪುಟ್ಟಣ್ಣ ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ.ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ವಿಧಾನಪರಿಷ್ ಸದಸ್ಯರಾಗಿಯೂ ಆಯ್ಕೆಯಾಗಿರುವ ಪುಟ್ಟಣ್ಣ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒಂದು ಸುತ್ತಿನ ಮಾತುಕತೆ ಮಾಡಿದ್ದಾರೆ.ನ.24ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ.