ಉತ್ತರ ಕನ್ನಡ: ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಂತ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ.
ತೀವ್ರ ಕುತೂಹಲ ಕೆರಳಿಸಿದ್ದಂತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್ ಪಕ್ಷದ ಅಂಜಲಿ ನಿಂಬಾಳ್ಕರ್ ನಡುವೆ ತೀವ್ರ ಹಣಾ ಹಣಿಯೇ ಏರ್ಪಟ್ಟಿತ್ತು.
ಆರಂಭದಿದ್ದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದಂತ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ.
Election Results 2024: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 54,658 ಮತಗಳಿಂದ ಮುನ್ನಡೆ