ಬೆಂಗಳೂರು: ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಕರ್ನಾಟಕದಲ್ಲಿ ಗೆದ್ದುಕೊಂಡು, ಹೀನಾಯ ಸೋಲು ಕಂಡಿತ್ತು. ಈ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ವಿವೇಕಾನಂದ ಗೆಲುವು ಸಾಧಿಸಿದ್ದಾರೆ.
ಇಂದು ವಿಧಾನ ಪರಿಷತ್ತಿಗೆ ನಡೆದಿದ್ದಂತ ಚುನಾವಣೆಯ ಮತಗಳ ಏಣಿಕೆ ಕಾರ್ಯ ನಡೆಯುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಿಜೆಪಿಯ ಅಭ್ಯರ್ಥಿ ವಿವೇಕಾನಂದ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರು ಹೀನಾಯ ಸೋಲು ಕಂಡಿದ್ದಾರೆ.
ಎರಡು ದಿನಗಳ ಅಂತರದಲ್ಲೇ ಸಿಎಂಗೆ 2 ಬಾರಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಾಣುವ ಮೂಲಕ ಮುಖಭಂಗ ಉಂಟಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ಧರಾಮಯ್ಯ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದರೇ, ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರು, ಬಿಜೆಪಿಯ ವಿವೇಕಾನಂದ ವಿರುದ್ಧ ಸೋಲು ಕಂಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಆರ್.ಅಶೋಕ್ ಆಗ್ರಹ
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್ : ಕೇವಲ 60 ಸೆಕೆಂಡ್ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್!