ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಹಿರಿಯ ನಾಯಕರ ಸೇರ್ಪಡೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅನೇಕ ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪುವ ಮುನ್ಸೂಚನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೇ ತಾವು ಸಚಿವ ಸ್ಥಾನ ಸಿಗದೇ ಹೋದರೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿಯೂ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಂಪುಟ ವಿಸ್ತರಣೆ, ಸಚಿವ ಸ್ಥಾನ ಹಂಚಿಕೆ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದರು. ಹೈಕಮಾಂಡ್ ಜೊತೆಗೆ ಚರ್ಚಿಸಿ ನಾಳೆ ನೂತನ ಸಚಿವರಾಗಿ 23 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸೋದಕ್ಕೆ ಗ್ರೀನ್ ಸಿಗ್ನಲ್ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಸಿದ್ಧರಾಮಯ್ಯ ಆಪ್ತರು, ಹಿರಿಯ ಕಾಂಗ್ರೆಸ್ ಶಾಸಕರಿಗೆ ಬಿಗ್ ಶಾಕ್ ಎನ್ನುವಂತೆ ಸಚಿವ ಸ್ಥಾನ ಕೈತಪ್ಪು ಭೀತಿ ಎದುರಾಗಿದೆ. ಎಂ.ಎಲ್ಸಿ ಬಿ.ಕೆ ಹರಿಪ್ರಸಾದ್ ಅಲ್ಲದೇ ಆರ್ ವಿ ದೇಶಪಾಂಡೆ, ಶಿರಾ ಕ್ಷೇತ್ರದ ಶಾಸಕ ಟಿ.ಬಿ ಜಯಚಂದ್ರ ಸೇರಿದಂತೆ ಅನೇಕರಿಗೆ ಸಿದ್ದು ಸಂಪುಟಕ್ಕೆ ಸೇರ್ಪಡೆ ಡೌಟ್ ಎನ್ನಲಾಗುತ್ತಿದೆ. ಆ ಬಗ್ಗೆ ಅಧಿಕೃತ ಮಾಹಿತಿಯನ್ನು ಸಿಎಂ ಸಿದ್ಧರಾಮಯ್ಯ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕೆಲವೇ ಕ್ಷಣಗಳಲ್ಲಿ ಇಂದು ಪ್ರಕಟಿಸಲಿದ್ದಾರೆ.
BIG NEWS: ಹಿರಿಯ ಶಾಸಕರಿಗೆ ಕೈತಪ್ಪಿದ ಸಚಿವ ಸ್ಥಾನ: ನಾಳೆ 23 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ?
ನೀರಿಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಡ್ಯಾಮ್ ಖಾಲಿ ಮಾಡಿದ ಅಧಿಕಾರಿ