Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

16/06/2025 10:14 PM

ಜಗತ್ತಿನ ಶೇ.50ರಷ್ಟು ಡಿಜಿಟಲ್ ವಹಿವಾಟುಗಳು ‘UPI’ ಮೂಲಕವೇ ನಡೆಯುತ್ತವೆ : ಪ್ರಧಾನಿ ಮೋದಿ

16/06/2025 10:03 PM

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಪ್ಪುಚುಕ್ಕೆ’ ರಿಮೂವಡ್ ಫ್ರಮ್ ‘ವೈಟ್ನರ್’ : ಸಿಎಂ ಸಿದ್ದರಾಮಯ್ಯಗೆ ತೀಕ್ಷ್ಣ ತಿರುಗೇಟು ನೀಡಿದ HD ಕುಮಾರಸ್ವಾಮಿ
KARNATAKA

‘ಕಪ್ಪುಚುಕ್ಕೆ’ ರಿಮೂವಡ್ ಫ್ರಮ್ ‘ವೈಟ್ನರ್’ : ಸಿಎಂ ಸಿದ್ದರಾಮಯ್ಯಗೆ ತೀಕ್ಷ್ಣ ತಿರುಗೇಟು ನೀಡಿದ HD ಕುಮಾರಸ್ವಾಮಿ

By kannadanewsnow0522/08/2024 7:18 PM

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಪ್ರಶ್ನೆ ಹಾಕಿದ್ದಾರೆ.

ತಮ್ಮ ಬಗ್ಗೆ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವರು, ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುತ್ತಿದ್ದೀರಿ ಎಂದು ಲೇವಡಿ ಮಾಡಿದರು.ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ.

ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ, ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ! ಎಂದು ಸಚಿವರು ಕಿಡಿಕಾರಿದ್ದಾರೆ.

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ, ಪಲಾಯನ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದಿರುವ ಸಚಿವರು; Kappu chukke removed from whitener!! ಎಂದು ಕುಟುಕಿದ್ದಾರೆ.

ಮೂಡದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ ಸತ್ತ ಜೀವದ ರುಚಿ ನೆಕ್ಕಲು.. ಎಂದು ಟೆಕಿಸಿರುವ ಅವರು; ಸಿದ್ದರಾಮಯ್ಯನವರೇ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ.. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದು ಹೇಳಿದ್ದಾರೆ.

ರಾಜ್ಯಪಾಲರಿಗೆ SIT ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ, ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ.. ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದ್ದಾರೆ.

ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ..
ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ… ‘ಸೋತರೆ ಸೋಲಬೇಕು ಬಾಹುಬಲಿಯಂತೆ..’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು. ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ.. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು ಎಂದು ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ ಕುಮಾರಸ್ವಾಮಿ ಅವರು.ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ ಅವರು ಎಚ್ಚರಿಕೆ ನೀಡಿದ್ದಾರೆ.

ಸಿದ್ದಕರ್ಮಿ ಶ್ರೀ @siddaramaiah ನವರೇ..

ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ.
ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ.

ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 22, 2024

Share. Facebook Twitter LinkedIn WhatsApp Email

Related Posts

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

16/06/2025 10:14 PM2 Mins Read

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM1 Min Read

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM1 Min Read
Recent News

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

16/06/2025 10:14 PM

ಜಗತ್ತಿನ ಶೇ.50ರಷ್ಟು ಡಿಜಿಟಲ್ ವಹಿವಾಟುಗಳು ‘UPI’ ಮೂಲಕವೇ ನಡೆಯುತ್ತವೆ : ಪ್ರಧಾನಿ ಮೋದಿ

16/06/2025 10:03 PM

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM
State News
KARNATAKA

ಕರ್ತವ್ಯಕ್ಕೆ ರಜೆ ಹಾಕದೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಿ: ಸಾಗರ ಶಾಸಕರ ಆಪ್ತ ಕಾರ್ಯದರ್ಶಿ ಸೂಚನೆ

By kannadanewsnow0916/06/2025 10:14 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕಾರಣದಿಂದಾಗಿ ಅಲ್ಲಲ್ಲಿ ಮಳೆಹಾನಿ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಸಾಗರ…

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ: ಛಲವಾದಿ ನಾರಾಯಣಸ್ವಾಮಿ

16/06/2025 9:57 PM

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

16/06/2025 9:48 PM

ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ

16/06/2025 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.