ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ದಿಮಾಂದ್ಯ ಮಕ್ಕಳಿಂದ ಸಂತಾಪ ಸೂಚಿಸಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರಿನ ಮಕ್ಕಳು ಸಂತಾಪ ಸೂಚಿಸಿದ್ದಾರೆ. ಮಕ್ಕಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಮೌನಾಚರಣೆ ಮೂಲಕ ಅಂತಿಮನಮನ ಸಲ್ಲಿಸಿದ್ದಾರೆ. ಅಲ್ಲದೆ ಅಂತಿಮ ದರ್ಶನದಲ್ಲಿ ಭಾಗಿಯಾಗಲು 70ಕ್ಕೂ ಹೆಚ್ಚು ಅಂಧ, ಬುದ್ಧಿಮಾಂದ್ಯ ಮಕ್ಕಳು ವಿಜಯಪುರಕ್ಕೆ ಹೊರಟಿದ್ದಾರೆ.

ಇನ್ನು ಮುಂಜಾನೆಯಿಂದಲೂ ಸಿದ್ದೇಶ್ವರ ಶ್ರೀಗಳ ದರ್ಶನ ಪಡೆಯಲು ಬರುತ್ತಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಬೆಳಂಬೆಳಗ್ಗೆ ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ಜಾವವೇ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಕಿದ ಕಾರಿಡಾರ್ ಸಂಪೂರ್ಣ ಭರ್ತಿಯಾಗಿದೆ.ಬಿಜ್ಜರಗಿ ಗ್ರಾಮದಿಂದ ಹೊರಡಲು ಬಸ್​, ಕ್ರೂಸರ್​ಗಳ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೂಡ ಮಾಡಲಾಗಿದೆ.

BIGG NEWS: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತಸಾಗರ; ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

 

Share.
Exit mobile version