ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿರುವಂತ ಅವರನ್ನು ಬಂಧನಕ್ಕಾಗಿ ಈಗ ಬಂಧನಕ್ಕಾಗಿ ಬ್ಲೂ ಕಾರ್ನರ್ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದರು.
ಮತ್ತೊಂದೆಡೆ ಇಂದು ದುಬೈನಿಂದ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿ, ಎಸ್ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಈವರೆಗೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದರ ನಡುವೆ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳಿಂದ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್: ಬಸವರಾಜ ಬೊಮ್ಮಾಯಿ