ಬೆಂಗಳೂರು : ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ49 ವೈದ್ಯಕೀಯ ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಾರ್ಡನ ಆಗಿರುವಂತ ಅಖಿಲಾಂಡೇಶ್ವರಿಯನ್ನು ಅಮಾನತುಗೊಳಿಸಲಾಗಿದೆ.
ಹೌದು ಬಿ ಎಂ ಸಿ ಹಾಸ್ಟೆಲ್ ವಾರ್ಡನ್ ಅಖಿಲಾಂಡೇಶ್ವರಿ ಅಮಾನತುಗೊಳಿಸಿ ಬಿ ಎಂ ಸಿ ಡೀನ್ ರಮೇಶ್ ಕೃಷ್ಣ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಊಟ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರತಿ ತಿಂಗಳು ಹಾಸ್ಟೆಲ್ ಆಡಳಿತ ಮಂಡಳಿ ಜೊತೆಗೆ ಸಭೆ ನಡೆಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲದೆ ಬಿಎಂಸಿ ಹಾಸ್ಟೆಲ್ ಅಡುಗೆ ಸಿಬ್ಬಂದಿಗಳನ್ನು ಬದಲಿಸಬೇಕು. ಹಾಸ್ಟೆಲ್ ರೂಮ್ ಕಿಚನ್ ಶೌಚಾಲಯವನ್ನು ಸ್ವಚ್ಛಗೊಳಿಸಬೇಕು. ಪ್ರತಿ ದಿನ ಶಿಫ್ಟ್ ನಲ್ಲಿ ಸ್ವಚ್ಛಗೊಳಿಸುವಂತೆ ಡೀನ್ ರಮೇಶ್ ಕೃಷ್ಣ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಸುಮೊಟೊ ಕೇಸ್ ದಾಖಲು
ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಐಸಿಯು ಹಾಗೂ ಜನರಲ್ ವಾರ್ಡ್ನಲ್ಲಿರುವ ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅನೇಕರಿಗೆ ಪ್ರಜ್ಞೆನೇ ಇರಲಿಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯದ ವಾಟರ್ ಟ್ಯಾಂಕ್ ರಿಪೇರಿಯಲ್ಲಿದೆ. ಇದರಲ್ಲಿಯ ನೀರನ್ನು ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದೆ. ಮೆಸ್ ಅನ್ನು ಬಂದ್ ಮಾಡಿಸಲಾಗಿದೆ. ವಿದ್ಯಾರ್ಥಿನಿಯರ ಬೆಡ್ನಲ್ಲಿ ತಿಗಣೆ ಇವೆ. ಇದರ ಬಗ್ಗೆ ವಿದ್ಯಾರ್ಥಿನಿಯರು ಹೇಳಿದ್ದಾರೆ ಎಂದು ತಿಳಿಸಿದರು.
ಅವರ ಆರೋಪಗಳ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ. ಒಂದು ವಾರದಲ್ಲಿ ವರದಿಯನ್ನು ಕೊಡಬೇಕು. ಹಾಗೂ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ. ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.