ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಜವಾಬ್ದಾರಿಯುತ ವರ್ತನೆ ಹಾಗೂ ಪ್ರಯಾಣದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಬಲಪಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ. ಮೆಟ್ರೋ ರೈಲುಗಳು ಸಾರ್ವಜನಿಕರ ಸಂಚಾರಕ್ಕಿದ್ದು, ಸುರಕ್ಷಿತ, ಆರಾಮದಾಯಕ ಮತ್ತು ಸುಖಕರ ಪ್ರಯಾಣಕ್ಕಾಗಿ ಎಲ್ಲಾ ಪ್ರಯಾಣಿಕರ ಸಹಭಾಗಿತ್ವ ಅಗತ್ಯವಿದೆ.
ಮೆಟ್ರೋ ರೈಲುಗಳಲ್ಲಿ ಹೆಡ್ ಫೋನ್ ಇಲ್ಲದೆ ಸಂಗೀತ ಕೇಳುವುದು, ಆಹಾರ ಸೇವಿಸುವುದು ಅಥವಾ ತಂಬಾಕು ಸೇವನೆ ಮಾಡುವುದು ಸಹ ಪ್ರಯಾಣಿಕರಿಗೆ ತೊಂದರೆಯನ್ನು ಉಂಟುಮಾಡುತ್ತದೆ. ಅದೇ ರೀತಿ, ಹಿರಿಯ ನಾಗರಿಕರಿಗೆ, ಗರ್ಭಿಣಿ ಮಹಿಳೆಯರಿಗೆ, ಅಂಗವಿಕಲರಿಗೆ ಮತ್ತು ಅಗತ್ಯವಿರುವವರಿಗೆ ಮೀಸಲು ಆಸನಗಳನ್ನು ಬಿಟ್ಟುಕೊಡುವುದು ಎಲ್ಲರ ಕರ್ತವ್ಯವಾಗಿದೆ.
ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಬಿಎಂಆರ್‌ಸಿಎಲ್ ವಿಶೇಷ ಜಾಗೃತಿ ಅಭಿಯಾನವನ್ನು, ಇಬ್ಬರು ಗೃಹ ರಕ್ಷಕರನ್ನೊಳಗೊಂಡ (ಹೋಮ್ ಗಾರ್ಡ್‌ಗಳು) ವಿಶೇಷ ತಂಡಗಳನ್ನು ಮೆಟ್ರೋ ರೈಲುಗಳಲ್ಲಿ ನಿಯೋಜಿಸಿ, ಪ್ರಯಾಣಿಕರಿಗೆ ತಿಳುವಳಿಕೆ ನೀಡುವ ಹಾಗೂ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗಿದೆ.
ಒಂದು ವರ್ಷದ ಈ ಅಭಿಯಾನದ ವಿಶ್ಲೇಷಣೆಯಲ್ಲಿ ಕೆಳಕಂಡ ಅಂಶಗಳು ಕಂಡುಬಂದಿವೆ:
- 57,538 ಪ್ರಯಾಣಿಕರು, ಜೋರಾಗಿ ಸಂಗೀತ ಕೇಳುವುದು,
- 37,038 ಪ್ರಯಾಣಿಕರು, ಅಗತ್ಯವಿರುವವರಿಗೆ ಮೀಸಲು ಆಸನಗಳನ್ನು ಬಿಡದೆ ಬಳಸಿರುವುದು
- 1,907 ಪ್ರಯಾಣಿಕರು, ರೈಲುಗಳೊಳಗೆ ಆಹಾರ ಸೇವಿಸುತ್ತಿರುವುದು
- 1,677 ಪ್ರಯಾಣಿಕರು ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವುದು ಕಂಡುಹಿಡಿಯಲಾಗಿದೆ.
ಮೆಟ್ರೋ ರೈಲ್ವೇಸ್ (ಆಪರೇಷನ್ ಅಂಡ್ ಮೆಂಟೆನನ್ಸ್) ಕಾಯ್ದೆ, 2002ರ ಅಡಿಯಲ್ಲಿ, ಸಹ ಪ್ರಯಾಣಿಕರಿಗೆ ತೊಂದರೆ ಉಂಟುಮಾಡಿದ್ಲಲಿ, ಕೆಲವು ಅಪರಾಧಗಳು ದಂಡಕ್ಕೆ ಒಳಪಡುತ್ತವೆ ಎಂಬುದನ್ನು ಬಿಎಂಆರ್‌ಸಿಎಲ್ ಪ್ರಯಾಣಿಕರಿಗೆ ತಿಳಿಸಲು ಬಯಸುತ್ತದೆ.
ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವಾಗ ನಿಯಮಗಳನ್ನು ಪಾಲಿಸುವಲ್ಲಿ, ಎಲ್ಲಾ ನಮ್ಮ ಮೆಟ್ರೋ ಪ್ರಯಾಣಿಕರ ನಿರಂತರ ಸಹಕಾರವನ್ನು ಬಿಎಂಆರ್‌ಸಿಎಲ್ ಕೋರುತ್ತದೆ. ರೈಲುಗಳೊಳಗೆ, ಸಂಗೀತ ಕೇಳುವಾಗ ಇಯರ್‌ಫೋನ್‌ಗಳನ್ನು ಬಳಸುವುದು, ಅಗತ್ಯವಿರುವವರಿಗೆ ಮೀಸಲು ಆಸನಗಳನ್ನು ನೀಡುವುದು, ಆಹಾರ ಸೇವನೆ ಮಾಡದಿರುವುದು ಮತ್ತು ತಂಬಾಕು ಸೇವನೆ ಮಾಡದಿರುವುದು, ಇತ್ಯಾದಿ ಸರಳ ಕ್ರಮಗಳು, ಹೆಚ್ಚು ಸುಖಕರ ಹಾಗೂ ಸುಗಮ ಪ್ರಯಾಣದ ವಾತಾವರಣ ನಿರ್ಮಿಸಲು ಮಹತ್ವದ ಪಾತ್ರ ವಹಿಸುತ್ತವೆ.
ನಮ್ಮ ಮೆಟ್ರೋದಲ್ಲಿ ಪ್ರತಿಯೊಂದು ಪ್ರಯಾಣವೂ ಎಲ್ಲರಿಗೂ ಸುರಕ್ಷಿತ, ಆರಾಮದಾಯಕ ಮತ್ತು ಆನಂದಕರವಾಗಿರಲು ಸಹ ಪ್ರಯಾಣಿಕರ ಸೌಜನ್ಯ, ಸಹನೆ ಮತ್ತು ಪರಸ್ಪರ ಗೌರವವನ್ನು ತೋರಿಸುವಂತೆ ಬಿಎಂಆರ್‌ಸಿಎಲ್ ಎಲ್ಲಾ ಪ್ರಯಾಣಿಕರಿಗೆ ಮನವಿ ಮಾಡುತ್ತದೆ.
ದಲಿತರ ಧ್ವನಿ ಅಡಗಿಸುವಲ್ಲಿ ಕಾಂಗ್ರೆಸ್ ಸಫಲ: ಹಿಂದೂ ವಿರೋಧಿ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ








