ಬೆಂಗಳೂರು: ಬಿಎಂಎಸ್ ಟ್ರಸ್ಟ್ ಮೇಲೆ ಅಕ್ರಮ ಆರೋಪ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಜೆಡಿಎಸ್ ಬೇಡಿಕೆ ಇಟ್ಟಿದ್ದಾರೆ. ಟ್ರಸ್ಟ್ ನ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು . ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ. ಸಿಎಂ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
BIG NEWS: ಸೀರೆಯ ಮೇಲೆ ಕೋಟ್ ಧರಿಸಲು ಹೇಳಿದ ಕೇರಳ ಶಾಲಾ ಶಿಕ್ಷಕಿ; ತಾರತಮ್ಯದ ಆರೋಪ ಹೊರಿಸಿ ಕೆಲಸಕ್ಕೆ ರಾಜೀನಾಮೆ
ವಿಧಾನಸಭೆಯಲ್ಲಿ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆದಾಖಲೆಗಳೇ ಎಲ್ಲವನ್ನೂ ಹೇಳುತ್ತದೆ. ಇನ್ನು ನನಗೆ ಹೊಡೆದ ಗುಂಡು ವಿಫಲವಾಗಿದೆ ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಎಂದಿದ್ದಾರೆ. ಸರ್ಕಾರ ಕಾನೂನಿನ ಮೂಲಕ ಕ್ರಮ ವಹಿಸಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾನೂನು ಕ್ರಮ ಅಂದರೆ ಸಾವಿರೂರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತನ್ನು ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ ಎಂದು ಪ್ರಶ್ನೆ ಮಾಡಿದ್ದಾರೆ.
BIG NEWS: ಸೀರೆಯ ಮೇಲೆ ಕೋಟ್ ಧರಿಸಲು ಹೇಳಿದ ಕೇರಳ ಶಾಲಾ ಶಿಕ್ಷಕಿ; ತಾರತಮ್ಯದ ಆರೋಪ ಹೊರಿಸಿ ಕೆಲಸಕ್ಕೆ ರಾಜೀನಾಮೆ
ಇನ್ನು ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದರು.ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ?
ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ? ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ ಎಂದು ಪ್ರಶ್ನೆ ಮಾಡಿದ್ದಾರೆ.
ಅಂದಹಾಗೆ 2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ BMS ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ BMS ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ @BJP4Karnataka ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? 9/11
— H D Kumaraswamy (@hd_kumaraswamy) September 23, 2022
ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? 10/11
— H D Kumaraswamy (@hd_kumaraswamy) September 23, 2022
ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ.11/11
— H D Kumaraswamy (@hd_kumaraswamy) September 23, 2022