ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ಉಳಿಕೆ ಮೂಲ ವೃಂದದ ನಿರ್ವಾಹಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿರ್ವಾಹಕರ ಉಳಿಕೆ ಮೂಲ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಹಾಗೂ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿ ವಾರು ಕೊನೆಯ ಅಭ್ಯರ್ಥಿಯ ಶೇಕಡವಾರು ಅಂಕಗಳ ವಿವರವನ್ನು ಪ್ರಕಟಿಸಿ ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದಿದೆ.
ಇನ್ನೂ ಸ್ವೀಕರಿಸಲಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಗಳ ಶೇಕಡವಾರು ಅಂದರೆ Cut-Off ಅಂಕ ಹಾಗೂ ಹುಟ್ಟಿದ ದಿನಾಂಕದ ವಿವರಗಳನ್ನು ಪರಿಶೀಲಿಸುವಂತೆ ತಿಳಿಸಿದೆ.
BREAKING: ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮೇಜರ್ ಸರ್ಜರಿ: 16 ಸಿಬ್ಬಂದಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ