ಬೆಂಗಳೂರು: ನಗರದಲ್ಲಿ ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ 10ಕ್ಕೂ ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ 607ಕ್ಕೆ ಬಸ್ ಡಿಕ್ಕಿಯಾಗಿ ಅಪಘಾತವಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ