ಬೆಂಗಳೂರು: ದ್ವಿತೀಯ ಪಿ.ಯು.ಸಿ ಪರೀಕ್ಷೆ-02 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿದೆ. ಈ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಾಹಿತಿ ಹಂಚಿಕೊಂಡಿದ್ದು, ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.
ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪರೀಕ್ಷೆ -02 ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ಹೇಳಿದೆ.
- ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ದಿನಾಂಕ 24.04.2025 ರಿಂದ 08.05.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
- ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.
- ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು.
- ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.
BREAKING: ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ: ಹಲವರಿಗೆ ಗಾಯ