ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್ನ್ಯೂಸ್ ನೀಡಿದ್ದು ಎಕ್ಸಾಂ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೇಟ್ ಅನ್ನು ತೋರಿಸುವ ಮೂಲಕ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ.ಕೆಎಸ್‌ಆರ್‌ಟಿಸಿಕೂಡ ಈ ಅವಕಾಶವನ್ನು ನೀಡಲಿದ್ದು, ಶೀಘ್ರದಲ್ಲಿ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲಿದೆ.
ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ
ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ.
01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 : ಸೋಮವಾರ ಗಣಿತ
05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ
07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ
09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 : ಇಂಗ್ಲಿಷ್ ಪರೀಕ್ಷೆ
15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 : ಅರ್ಥಶಾಸ್ತ್ರ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
22-03-2024 : ಹಿಂದಿ ಪರೀಕ್ಷೆ
ಮೋದಿ ಸರ್ಕಾರದ ಮಹತ್ವದ ಯೋಜನೆ : ದೇಶದ 3 ಕೋಟಿ ಮಹಿಳೆಯರನ್ನ ‘ಲಕ್ಷಾಧಿಪತಿ’ ಮಾಡುವ ಗುರಿ