ಬೆಂಗಳೂರು: ವಿದೇಶಗಳಲ್ಲಿ ಕೋವಿಡ್-19 ( Covid19 ) ಪ್ರಮಾಣ ಹೆಚ್ಚಳದ ಹಿನ್ನಲೆಯಲ್ಲಿ, ಬಿಎಂಟಿಸಿಯಿಂದಲೂ ( BMTC ) ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಸಿಬ್ಬಂದಿಗಳು, ಪ್ರಯಾಣಿಕರು ಪಾಲಿಸುವಂತೆ ತಿಳಿಸಲಾಗಿದೆ.
BREAKING NEWS: ಸಶಸ್ತ್ರ ಪಡೆಗಳ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ | One Rank One Pension
ಈ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ವಿಶ್ವದ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ( Covid19 Case ) ಏರಿಕೆಯಾಗುತ್ತಿವೆ. ಅಲ್ಲದೇ ಮುಂಬರುವ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವ ಅಗತ್ಯತೆ ಮತ್ತು ಸಾಮೂಹಿಕ ಸಾರಿಗೆ ಪ್ರಯಾಣದ ಸಂದರ್ಭದಲ್ಲಿ ಹೆಚ್ಚು ಜಾಗರೂಕರಾಗಿ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಸೂಚಿ ಕ್ರಮ ಪಾಲಿಸುವಂತೆ ತಿಳಿಸಿದ್ದಾರೆ.
BREAKING NEWS: ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ನಿಯೋಜನೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಆದೇಶ
ಹೀಗಿದೆ ಬಿಎಂಟಿಸಿ ಸಿಬ್ಬಂದಿ, ಪ್ರಯಾಣಿಕರ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳು
- ಚಾಲನಾ ಸಿಬ್ಬಂದಿಗಳನ್ನು ಒಳಗೊಂಡಂತೆ ಸಂಸ್ಥೆಯ ಎಲ್ಲಾ ವರ್ಗದ ಸಿಬ್ಬಂದಿಗಳು, ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕರ್ತವ್ಯ ನಿರ್ವಹಿಸಬೇಕು.
- ಸಿಬ್ಬಂದಿಗಳು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕರ್ತವ್ಯ ನಿರ್ವಹಿಸುವುದು.
- ಬಸ್ಸಿನಲ್ಲಿ ಸಂಚರಿಸುವ ಪ್ರಯಾಣಿಕರು ಸಹ ಮಾಸ್ಕ್ ಧರಿಸತಕ್ಕದ್ದು, ಆಕಸ್ಮಾತ್ ಮಾಸ್ಕ್ ಹಾಕದೇ ಇದ್ದಲ್ಲಿ ಅಂತಹ ಪ್ರಯಾಣಿಕರಿಗೆ ಚಾಲನಾ ಸಿಬ್ಬಂದಿಗಳು ಮಾಸ್ಕ್ ಹಾಕಲು ತಿಳಿಸತಕ್ಕದ್ದು.
- ಶೀತಜ್ವರದ ಅನಾರೋಗ್ಯ ಮತ್ತು ತೀವ್ರ ಉಸಿರಾಟದ ಸೋಂಕಿನ ಲಕ್ಷಣಗಳು ಗೋಚರಿಸಿದ ತಕ್ಷಣ ಕೋವಿಡ್-19 ತಪಾಸಣೆಗೊಳಪಟ್ಟು, ಪರೀಕ್ಷೆ ವರದಿ ಬರುವವರೆಗೆ ಕಡ್ಡಾಯವಾಗಿ ಮನೆಯಲ್ಲಿ ಪ್ರತ್ಯೇಕವಾಗಿರಬೇಕು.
- ಈಗಾಗಲೇ 1 ಮತ್ತು 2ನೇ ಡೋಸ್ ಕೊರೋನಾ ಲಸಿಕೆ ಪಡೆದವರು, ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಿದೆ.