ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಖಾಲಿಯಿರುವ 2,500 ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. https://kannadanewsnow.com/kannada/full-schedule-for-lok-sabha-elections-2024-likely-to-be-announced-this-week-report/
31ವರ್ಷದ ʻರಾಜವಂಶಸ್ಥ ಯದುವೀರ್ ಒಡೆಯರ್ʼಗೆ ಬಿಜೆಪಿ ಲೋಕಸಭೆ ಟಿಕೇಟ್! ಅವರ ಬಗ್ಗೆ ಮಾಹಿತಿ ಇಲ್ಲಿದೆ
ʻಲೋಕಸಭಾ ಚುನಾವಣೆ 2024ʼರ ಸಂಪೂರ್ಣ ವೇಳಾಪಟ್ಟಿ ಈ ವಾರ ಪ್ರಕಟ ಸಾಧ್ಯತೆ : ವರದಿ
Paytm layoffs: ಬಿಕ್ಕಟ್ಟಿನ ಮಧ್ಯೆ ಹಲವು ಉದ್ಯೋಗಿಗಳನ್ನು ‘ವಜಾ’ ಮಾಡಲು ಮುಂದಾದ ಪೇಟಿಎಂ!
ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ನಿರ್ವಾಹಕ (ಕಂಡಕ್ಟರ್ )
ಹುದ್ದೆಗಳ ಸಂಖ್ಯೆ : 2500.
ಶೈಕ್ಷಣಿಕ ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್. ಅಥವಾ 3 ವರ್ಷಗಳ ಡಿಪ್ಲೊಮ ಪಾಸ್. ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿಯನ್ನು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳು ಮಾನ್ಯವಿಲ್ಲ. ಇವರು ಅರ್ಜಿ ಹಾಕಲು ಅರ್ಹರಲ್ಲ.
ಇತರೆ ಅರ್ಹತೆ : ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರತಕ್ಕದ್ದು.
ಪುರುಷರ ಎತ್ತರ 160 CM, ಮಹಿಳೆಯರ ಎತ್ತರ 150 CM ಇರಬೇಕು. ಅಪ್ಲಿಕೇಶನ್ ಶುಲ್ಕ ವಿವರ ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಅರ್ಜಿ ಶುಲ್ಕ ರೂ.750. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.
ವಯಸ್ಸಿನ ಅರ್ಹತೆಗಳು : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 10-04-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ವರ್ಗಾವಾರು ಕೆಳಗಿನಂತೆ ಮೀರಿರಬಾರದು. ಸಾಮಾನ್ಯ ವರ್ಗ – 35 ವರ್ಷಗಳು.= 2A / 2B / 3A / 3B ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗ ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷಗಳು. ಮಾರ್ಚ್ 10ರಿಂದ ಏಪ್ರಿಲ್ 10ರ ವರೆಗೆ ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.\ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್: https://kea.kar.nic.inನಲ್ಲಿ ಅಗತ್ಯ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಗಳು, ಅಧಿಸೂಚನೆಯಲ್ಲಿ ಸೂಚಿಸಿರುವ ವಿದ್ಯಾರ್ಹತೆ, ದೈಹಿಕ ದೃಢತೆ, ಷರತ್ತು ಮತ್ತು ಸೂಚನೆಗಳನ್ನು ಸ್ಪಷ್ಟವಾಗಿ ಓದಿ, ಅರ್ಹತೆಯಿದ್ದರೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.