ಬೆಂಗಳೂರು : ವಿದ್ಯಾರ್ಥಿಗಳ ಬಸ್ ಪಾಸ್ ಕುರಿತು ಕಂಡಕ್ಟರ್ ಗೆ ಬಿಎಂಟಿಸಿ ಮಹತ್ವದ ಸೂಚನೆ ನೀಡಿದ್ದು, ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚನೆ ನೀಡಿದೆ.
ವಿದ್ಯಾರ್ಥಿಗಳು ಸಂಜೆ 7.30 ರ ಬಳಿಕ ಬಿಎಂಟಿಸಿ ಬಸ್ನಲ್ಲಿ ಸಂಚರಿಸುವ ಹಾಗಿಲ್ಲ ಎಂಬ ಸೂಚನೆ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು.
ಹೀಗಾಗಿ ವಿದ್ಯಾರ್ಥಿಗಳು ಬಿಎಂಟಿಸಿ ಕಚೇರಿಗೆ ದೂರು ಸಲ್ಲಿಸಿದ್ದರು. ಇದೀಗ ವಿದ್ಯಾರ್ಥಿಗಳ ಮನವಿ ಮೇರೆಗೆ ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚನೆ ನೀಡಿದೆ.ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚೆನೆ ನೀಡಿದೆ.
ವಿದ್ಯಾರ್ಥಿಗಳ ದೂರನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಬಿಎಂಟಿಸಿ ಪಾಸ್ ಉಪಯೋಗಿಸಿಕೊಂಡು ಯಾವ ಸಮಯದಲ್ಲಿ ಬೇಕಾದರೂ ಪ್ರಯಾಣಿಸಬಹುದು. ಪಾಸ್ ಇರುವ ವಿದ್ಯಾರ್ಥಿಗಳ ಬಳಿ ನಿರ್ವಾಹಕರು ಟಿಕೆಟ್ ತೆಗೆದುಕೊಳ್ಳುವಂತಿಲ್ಲ ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ. 7.30ರ ಬಳಿಕ ಸ್ಟೂಡೆಂಟ್ ಪಾಸ್ ಮಾನ್ಯ ಮಾಡ್ಬೇಡಿ ಎನ್ನುವ ಆದೇಶವನ್ನು ಬಿಎಂಟಿಸಿ ಕಚೇರಿ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಸಾರ್ವಜನಿಕರೇ ಎಚ್ಚರ ; ವಂಚನೆಗಿಳಿದಿದೆ ಗ್ಯಾಂಗ್, ಮೂತ್ರಪಿಂಡ ಕಸಿ ಹೆಸ್ರಲ್ಲಿ 10 ಲಕ್ಷ ವಂಚನೆ |Kidney Fraud
‘ಪ್ರೋಟೋಕಾಲ್ ಪ್ರಕಾರ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಇರಬೇಕಿತ್ತು’ : ಮಾಜಿ ಸಿಎಂ ಸಿದ್ದರಾಮಯ್ಯ