ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತ ನಿರ್ವಾಹಕ (ದರ್ಜೆ 3) 2,500 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ದ್ವಿತೀಯ ಪಿಯುಸಿ ಪಾಸ್ ಆದಂತವರು ಏಪ್ರಿಲ್.10ರೊಳಗೆ ಅರ್ಜಿ ಸಲ್ಲಿಸೋದು ಮಿಸ್ ಮಾಡಬೇಡಿ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.
ಹುದ್ದೆಗಳ ವಿವರ
ಮಿಕ್ಕುಳಿದ ವೃಂದ -2286 ಹುದ್ದೆಗಳು
ಸ್ಥಳೀಯ ವೃಂದ – 199 ಹುದ್ದೆಗಳು ಹಾಗೂ ಹಿಂಬಾಕಿ 15 ಹುದ್ದೆಗಳು ಸೇರಿ 214 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ
ಪಿಯುಸಿ ಆರ್ಟ್ಸ್, ಕಾಮರ್ಸ್, ಸೈನ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ಐಸಿಎಸ್ಇ, ಸಿಬಿಎಸ್ಇರಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾಹ್ರತೆ ಅಂದರೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು.
ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು.
ವಯೋಮಿತಿ
ಸಾಮಾನ್ಯ ವರ್ಗದವರಿಗೆ 35 ವರ್ಷಗಳು. 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷ.
ವೇತನ ಶ್ರೇಣಿ – ರೂ.18,660ರಿಂದ 25,300
ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-03-2024ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ 13-04-2024 ಆಗಿರುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.750. ಎಸ್ಸಿ, ಎಸ್ಟಿ ಪ್ರವರ್ಗ-1, ಮಾಜಿ ಸೈನಿಕರರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.
ಬೆಂಗಳೂರಿನ ‘ಆಸ್ತಿ ತೆರಿಗೆದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶೇ.5ರಷ್ಟು ರಿಯಾಯಿತಿ’ ಅವಧಿ ವಿಸ್ತರಣೆ
ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾವುಕ ನುಡಿ