ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತವರ ವಿರುದ್ಧ 1092 ಕೇಸ್ ದಾಖಲಿಸಿ, 8.25 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ.
ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಮೇ-2024 ರ ಮಾಹೆಯಲ್ಲಿ ಒಟ್ಟು 19,125 ಟ್ರಿಪ್ಗಳನ್ನು ತಪಾಸಿಸಿ 4064 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 8,25,210/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1092 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 501 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 50,100/- ನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ ಮೇ-2024 ರ ಮಾಹೆಯಲ್ಲಿ 4,565 ಪ್ರಯಾಣಿಕರಿಂದ ಒಟ್ಟು ರೂ 8,75,310/- ದಂಡವನ್ನು ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.
ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ / ದಿನದ ಪಾಸು / ವಾರದ ಪಾಸು / ಮಾಸಿಕ ಪಾಸು /ಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಿದೆ.
BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder
Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ