Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ‘BMTC ಬಸ್‍’ ಖರೀದಿ
KARNATAKA

ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ‘BMTC ಬಸ್‍’ ಖರೀದಿ

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣಸೌಧ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.

ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ / ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 44 ಲಕ್ಷ ಪ್ರಯಾಣಿಕರು ಸಂಸ್ಥೆಯ ಸಾರಿಗೆಗಳಲ್ಲಿ ಪ್ರಯಾಣಿಸುತ್ತಿದ್ದು, ಸಂಸ್ಥೆಯಲ್ಲಿ ನವೆಂಬರ್-2025ರ ಅಂತ್ಯಕ್ಕೆ 7051 ಬಸ್ಸುಗಳು ಕಾರ್ಯಾಚರಣೆಯಲ್ಲಿವೆ ಎಂದು ಹೇಳಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಾರಿಗೇತರ ಆದಾಯವನ್ನು ಕ್ರೋಢಿಕರಿಸಲು ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶಿಸಲು ಪ್ರೆಕ್ಯೂರ್‌ಮೆಂಟ್‌ ಮೂಲಕ ಟೆಂಡರ್ ಕರೆದು ಆಸಕ್ತ ವ್ಯಕ್ತಿ/ಏಜೆನ್ಸಿ/ಕಂಪನಿಗಳಿಗೆ ನಿಗದಿತ ಅವಧಿಗೆ ಹಾಗೂ ಇತರೆ ನಿಬಂಧನೆಗಳಿಗೆ ಒಳಪಟ್ಟು ಪರವಾನಗಿ ನೀಡುವ ಜಾಹೀರಾತು ಪದ್ಧತಿ ಜಾರಿಯಲ್ಲಿರುತ್ತದೆ ತಿಳಿಸಿದ್ದಾರೆ.

ಪರವಾನಗಿ ಶುಲ್ಕದ ಜೊತೆಗೆ ಜಾಹೀರಾತು ಪ್ರದರ್ಶಿಸಲಾಗುವ ಪ್ರತಿ ಬಸ್ಸುಗಳಿಗೆ ಅನ್ವಯವಾಗುವ ಇತರೆ ಶುಲ್ಕಗಳನ್ನು ಸಹ ಪಾವತಿಸಬೇಕಾಗಿರುತ್ತದೆ. ಸಾರಿಗೆ ನಿಗಮಗಳಿಗೆ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಒಟ್ಟು 650 ಬಸ್ಸುಗಳನ್ನು ಖರೀದಿಸುವಂತೆ ಆರ್ಥಿಕ ಇಲಾಖೆಯು ಸೂಚಿಸಿದ್ದು, ಅದರಂತೆ ಕ.ರಾ.ರ.ಸಾ.ನಿಗಮಕ್ಕೆ ಅವಶ್ಯವಿರುವ 500 ಡೀಸೆಲ್ ಮಾದರಿಯ ಬಸ್ಸುಗಳನ್ನು ಹಾಗೂ 144 ನಗರ ಸಾರಿಗೆ ಮಾದರಿ ವಾಹನಗಳನ್ನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಸಾಲಿನಲ್ಲಿ ಇಲ್ಲಿಯವರೆಗೆ 5 ವೋಲ್ವೊ ಮಲ್ಟಿ ಆಕ್ಸಲ್ ಸೀಟರ್ ಹಾಗೂ 5 ಮಲ್ಟಿ ಆಕ್ಸಲ್ ಸ್ವೀಪರ್ ವಾಹನಗಳನ್ನು ಖರೀದಿಸಲಾಗಿದೆ ಹಾಗೂ 60 ನಾನ್ ಎಸಿ ಸ್ವೀಪರ್ (ಪಲ್ಲಕ್ಕಿ) ವಾಹನಗಳಿಗೆ ಖರೀದಿ ಆದೇಶ ಬಿಡುಗಡೆ ಮಾಡಲಾಗಿದ್ದು, ಮಾರ್ಚ್-2026ರೊಳಗೆ ಸೇರ್ಪಡೆಗೊಳಿಸಲಾಗುವುದು ಎಂದಿದ್ದಾರೆ.

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಸವ ವಸತಿ ಯೋಜನೆಯ ಸಹಾಯಧನ ಹೆಚ್ಚಳ

ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.