ಬೆಂಗಳೂರು: ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದಂತ 5, 8 ಮತ್ತು 9ನೇ ತರಗತಿ ಪರೀಕ್ಷೆ ಸ್ಥಗಿತಗೊಂಡಿತ್ತು. ಈ ಪರೀಕ್ಷೆ ಸಂಬಂಧ ಹೈಕೋರ್ಟ್ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿ, ಮುಂದುವರೆಸೋದಕ್ಕೆ ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಸೋಮವಾರದಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಾರಂಭವಾಗಲಿದೆ. ಇದಕ್ಕಾಗಿ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನಲ್ಲಿ ಸಂಕಲನಾತ್ಮಕ ಮೌಲ್ಯಾಮಾಪನ-2 ಅಂದರೇ ಎಸ್ಎ-2 ನಡೆಸೋದಕ್ಕೆ ನಿರ್ಧರಿಸಲಾಗಿತ್ತು ಎಂದಿದ್ದಾರೆ.
ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಪರೀಕ್ಷೆಯನ್ನು ರದ್ದುಪಡಿಸಿ ಆದೇಶಿ, ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಧ್ಯಂತರ ಅರ್ಜಿಗಳ ವಿಚಾರಣೆ ಸೂಚಿಸಿತ್ತು. ಆ ಅರ್ಜಿಗಳನ್ನು ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿದೆ ಎಂದು ತಿಳಿಸಿದ್ದಾರೆ.
ಇಂದು ಹೈಕೋರ್ಟ್ 5, 8 ಮತ್ತು 9ನೇ ತರಗತಿ 2023-24ನೇ ಸಾಲಿನ ಬೋರ್ಡ್ ಪರೀಕ್ಷೆಯ ಉಳಿದ ವಿಷಯಗಳ ಪರೀಕ್ಷೆ ಮುಂದುವರೆಸಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಮಾ.25ರ ಸೋಮವಾರದಿಂದ ಬೋರ್ಡ್ ಪರೀಕ್ಷೆ ಪ್ರಾರಂಭಿಸಲಾಗುತ್ತಿದೆ. ಇದಕ್ಕಾಗಿ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸೋದಾಗಿ ತಿಳಿಸಿದ್ದಾರೆ.
‘ಲೋಕಸಭಾ ಚುನಾವಣೆ’ ಹೊತ್ತಲ್ಲೇ ಉಪಯುಕ್ತ ಮಾಹಿತಿ: ಹೀಗಿವೆ ‘ನೀತಿ ಸಂಹಿತೆ ಕಾಯ್ದೆ ಮತ್ತು ಕಲಂ’ಗಳು
BREAKING : ವಿಮಾನ ನಿಯಮ ಉಲ್ಲಂಘಿಸಿದ ‘ಏರ್ ಇಂಡಿಯಾ’ಗೆ ಬಿಗ್ ಶಾಕ್ : 80 ಲಕ್ಷ ರೂಪಾಯಿ ದಂಡ ವಿಧಿಸಿದ ‘DGCA’