ಬೆಂಗಳೂರು: ಗುರುವಾರದಂದು ಹೈಕೋರ್ಟ್ ನಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಬೆನ್ನಲ್ಲೇ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದಿದ್ದಾರೆ.
ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-202400 ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಿದ್ದು, ಅದರಂತೆ ಈಗಾಗಲೇ ನಿಗಧಿಯಾಗಿರುವ ವೇಳಾಪಟ್ಟಿಯಂತೆ ಮೌಲ್ಯಾಂಕನ ಕಾರ್ಯವು ಯಥಾವತ್ತಾಗಿ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.
ಹೀಗಿದೆ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿ
ಹೀಗಿದೆ 5ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿ
- ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
- ದಿನಾಂಕ 12-03-2023ರ ಮಂಗಳವಾರ- ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
- ದಿನಾಂಕ 13-03-2024ರ ಬುಧವಾರ – ಕೋರ್ ವಿಷಯ – ಪರಿಸರ ಅಧ್ಯಯನ
- ದಿನಾಂಕ 14-03-2024ರ ಗುರುವಾರ- ಕೋರ್ ವಿಷಯ – ಗಣಿತ
ಹೀಗಿದೆ 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿ
- ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್ ( NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ
- ದಿನಾಂಕ 12-03-2024ರ ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ.
- ದಿನಾಂಕ 13-03-2024ರ ಬುಧವಾರ – ತೃತೀಯ ಭಾಷೆ – ಹಿಂದಿ, ಹಿಂದಿ ( NCERT), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
- ದಿನಾಂಕ 14-03-2024ರ ಗುರುವಾರ – ಕೋರ್ ವಿಷಯ – ಗಣಿತ.
- ದಿನಾಂಕ 15-03-2024ರ ಶುಕ್ರವಾರ – ಕೋರ್ ವಿಷಯ – ವಿಜ್ಞಾನ.
- ದಿನಾಂಕ 16-03-2024ರ ಶನಿವಾರ – ಕೋರ್ ವಿಷಯ- ಸಮಾಜ ವಿಜ್ಞಾನ.
- ದಿನಾಂಕ 18-03-2024ರ ಸೋಮವಾರ – ದೈಹಿಕ ಶಿಕ್ಷಣ.
ಹೀಗಿದೆ 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿ
- ದಿನಾಂಕ 11-03-2024ರ ಸೋಮವಾರ- ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಇಂಗ್ಲೀಷ್(NCERT), ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
- ದಿನಾಂಕ 12-03-2024ರ ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ.
- ದಿನಾಂಕ 13-03-2024ರ ಬುಧವಾರ – ತೃತೀಯ ಭಾಷೆ – ಹಿಂದಿ, ಹಿಂದಿ ( NCERT), ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
- ದಿನಾಂಕ 14-03-2024ರ ಗುರುವಾರ – ಕೋರ್ ವಿಷಯ – ಗಣಿತ
- ದಿನಾಂಕ 15-03-2024ರ ಶುಕ್ರವಾರ – ಕೋರ್ ವಿಷಯ – ವಿಜ್ಞಾನ
- ದಿನಾಂಕ 16-03-2024ರ ಶನಿವಾರ – ಕೋರ್ ವಿಷಯ – ಸಮಾಜ ವಿಜ್ಞಾನ
- ದಿನಾಂಕ 18-03-2024ರ ಸೋಮವಾರ – ದೈಹಿಕ ಶಿಕ್ಷಣ.