ಉತ್ತರ ಪ್ರದೇಶ: ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿನ ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಿದ್ದು, ರಕ್ಷಣಾ ತಂಡಗಳು ಗುರುವಾರ ನದಿಯಿಂದ ಐದು ಮಕ್ಕಳ ಶವಗಳನ್ನು ಹೊರತೆಗೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಸಂಜೆ ಈ ಘಟನೆ ನಡೆದಿದ್ದು, 24 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ರೆಯೋತಿಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನದಿಯಲ್ಲಿ ಮುಳುಗಿದೆ. ಜನರು ವಾರದ ಮಾರುಕಟ್ಟೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳೀಯರ ಸಹಾಯದಿಂದ ಕೆಲವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ಮೃತರನ್ನು ಸಂಧ್ಯಾ ಕುಮಾರ್ (6), ಅನಿತಾ ಪಾಸ್ವಾನ್ (10), ಅಲಿಸಾ ಯಾದವ್ (5), ಖುಶಾಲ್ ಯಾದವ್ (10) ಮತ್ತು ಸತ್ಯಂ (12) ಎಂದು ಗುರುತಿಸಲಾಗಿದೆ.
ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.
BIGG BREAKING NEWS : ಮುರುಘಾಮಠದ ಶ್ರೀಗಳಿಗೆ ಎದೆನೋವು : ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್
BIG NEWS: ಸೆ.5ಕ್ಕೆ ಬಾಂಗ್ಲಾದೇಶದ ಪ್ರಧಾನಿ ʻಶೇಖ್ ಹಸೀನಾʼ ಭಾರತಕ್ಕೆ ಭೇಟಿ | Sheikh Hasina to visit India