ಮಧ್ಯಪ್ರದೇಶ: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಕೊಟ್ಖೇಡಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೂವರು ಸಹೋದರಿಯರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಸಹೋದರಿಯರಾದ ಸೋನು, ಸಾವಿತ್ರಿ ಮತ್ತು ಲಲಿತಾ ಎಂದು ಗುರುತಿಸಲಾಗಿದ್ದು, ಅವರು ತಮ್ಮ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ಆದ್ರೆ, ಇದೀಗ ಮೂವರು ಕೂಡ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.
ಸುದ್ದಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗದ ಕಾರಣ ಸಾವಿನ ಹಿಂದಿನ ಪ್ರಮುಖ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
‘ಆಜಾದಿ ಕಾ ಅಮೃತ್ ಮಹೋತ್ಸವ’: 12,000 ಅಡಿ ಎತ್ತರದಲ್ಲಿ ‘ತಿರಂಗ’ ಹಾರಿಸಿದ ITBP ಪಡೆ… ವಿಡಿಯೋ