ಬೆಳಗಾವಿ: ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಈಗ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಬಂದು ತಲುಪಿದೆ.
ಸೇನಾ ತೆರೆದ ವಾಹನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಮೆರವಣಿಗೆ ಆರಂಭವಾಗಿದೆ. ಅವರ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗಿದೆ. ಈಗಾಗಲೇ ಅವರ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಇನ್ನೇನು ಕೆಲವೇ ಕ್ಷಣದಲ್ಲಿ ರಾಜಕಾರಣಿಗಳು ಸಹ ಬೆಳಗಾವಿಯತ್ತ ಬರುತ್ತಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ತೋಟದಲ್ಲಿರುವ ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ವಿಧಿವಿಧಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ.