ನವದೆಹಲಿ: ಬಾಲಿವುಡ್ ನಟಿ ಜಾನ್ವಿ ಕಪೂರ್ ( Bollywood actress Janhvi Kapoor ) ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ದಕ್ಷಿಣ ಮುಂಬೈನ ಎಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಜಾನ್ವಿ ಚೆನ್ನೈಗೆ ಹೋಗಿದ್ದರು ಮತ್ತು ಮಂಗಳವಾರ ಅಲ್ಲಿಂದ ಹಿಂದಿರುಗುವಾಗ, ವಿಮಾನ ನಿಲ್ದಾಣದಲ್ಲಿ ಆಹಾರವನ್ನು ಸೇವಿಸಿದ್ದಾರೆ. ಈ ಬಳಿಕ ಮನೆಗೆ ತೆರಳಿದಂತ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಮುಂಬೈನ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ಆಸ್ಪತ್ರೆಯ ವೈದ್ಯರು, ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅವರಿಗೆ ಪುಟ್ ಪಾಯಿಸನ್ ಆಗಿರೋದಾಗಿ ತಿಳಿಸಿದ್ದಾರೆ. ಅಲ್ಲದೇ ಅನಾರೋಗ್ಯ ಮತ್ತು ದೌರ್ಬಲ್ಯದಿಂದಾಗಿ, ವೈದ್ಯರ ಸಲಹೆಯ ಮೇರೆಗೆ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಸ್ತುತ ಜಾನ್ವಿ ಅವರ ಸ್ಥಿತಿ ಉತ್ತಮವಾಗಿದೆ ಮತ್ತು ಶುಕ್ರವಾರದ ವೇಳೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ‘ಯು ಟರ್ನ್’ ನಡೆ ಸರಿಯಲ್ಲ: APP ಮುಖ್ಯಮಂತ್ರಿ ಚಂದ್ರು