ಬೆಂಗಳೂರು: ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ನಗರದ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಹೀಗಾಗಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಹೆಚ್ ಎಂ ಟಿ ಗ್ರೌಂಡ್ ಬಳಿಯಿರುವಂತ ಕದಂಬ ಹೋಟೆಲ್ ಗೆ ಬಾಂಬ್ ಇಟ್ಟಿರೋದಾಗಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ. ಈ ಕೂಡಲೇ ಅಲರ್ಟ್ ಆದಂತ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಕದಂಬ ಹೋಟೆಲ್ ಅನ್ನು ಪರಿಶೀಲನೆ ನಡೆಸಲಾಗಿದೆ. ಸುಮಾರು ಅರ್ಧಗಂಟೆ ಸ್ಥಳದಲ್ಲಿ ಬಾಂಬ್ ಗಾಗಿ ಹುಡುಕಾಡಿದ್ರೂ ಎಲ್ಲಿಯೂ ಪತ್ತೆಯಾಗಿಲ್ಲ. ಆ ಬಳಿಕ ಇದು ಹುಸಿ ಬೆದರಿಕೆ ಪತ್ರ ಎಂಬುದಾಗಿ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ಈಗ ಬಾಂಬ್ ಬೆದರಿಕೆ ಪತ್ರ ಬರೆದ ಆರೋಪಿಗಾಗಿ ತನಿಖೆ ಕೈಗೊಂಡಿದ್ದಾರೆ.

ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

Share.
Exit mobile version