ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಕರ್ನಾಟಕದ ರಾಜ್ಯಪಾಲರ ನಿವಾಸವಾಗಿರುವಂತ ಲೋಕಭವನಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು. ಈ ಬಗ್ಗೆ ಪೊಲೀಸರು ತಪಾಸಣೆ ನಡೆಸಿದಾಗ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ದುಷ್ಕರ್ಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದು, ಕೇಸ್ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜನವರಿ.14ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವಂತ ರಾಜ್ಯಪಾಲರ ನಿವಾಸವಾದಂತ ಲೋಕಭವನಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದ ದಳದೊಂದಿಗೆ … Continue reading ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು